ಮಹಿಳೆ ಕಾಣೆ ಪ್ರಕರಣ ದಾಖಲು
ವಿಜಯನಗರ(ಹೊಸಪೇಟೆ) 24: ಹೊಸಪೇಟೆಯ ಅನಂತಶಯನ ಗುಡಿಯ ನಿವಾಸಿಯಾದ ಸುಮಾರು 28 ವರ್ಷದ ಬಿ.ರಾಜು ಅವರ ಪತ್ನಿ ವಿಜಯಲಕ್ಷೀ ಎಂಬ ಮಹಿಳೆ ಆ.07ರಂದು ಕಾಣೆಯಾಗಿರುವ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಮಹಿಳೆಯ ಚಹರೆ ಗುರುತು: ಎತ್ತರ 5.2 ಅಡಿ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, ಕನ್ನಡ, ಹಿಂದಿ, ತೆಲುಗು ಭಾಷೆಯನ್ನು ಮಾತನಾಡುತ್ತಾಳೆ, ಕೆಂಪು ಬಣ್ಣದ ಚೂಡಿದಾರ ಧರಿಸಿರುತ್ತಾಳೆ.
ಈ ಮೇಲ್ಕಂಡ ಚಹರೆಯುಳ್ಳ ಮಹಿಳೆಯ ಬಗ್ಗೆ ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್ ದೂ.ಸಂ.100, ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ದೂ.ಸಂ.08394-226100, 08394-228233, ಪೊಲೀಸ್ ಇನ್ಸ್ಪೆಕ್ಟರ್ ದೂ.ಸಂ.9480803075ಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.