ಜಮಖಂಡಿ

ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಮಹಿಳೆ ರಕ್ಷಣೆ

ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಮಹಿಳೆ ರಕ್ಷಣೆ

ಲೋಕದರ್ಶನ ವರದಿ 


ಜಮಖಂಡಿ 08 : ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ಗ್ರಾಮಸ್ಥರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಚಿಕ್ಕಪಡಸಲಗಿ ಕೃಷ್ಣಾ ನದಿಯ ಗೌಡ್ರ ಗಡ್ಡೆಯ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುಲು ಮುಂದಾದ ಮಹಿಳೆಯು ಬೆಳಗಾವಿ ಜಿಲ್ಲೆ, ರಾಮದುರ್ಗ ತಾಲ್ಲೂಕಿನ ಹೊಸಕೋಟೆ ಗ್ರಾಮದ ಶೋಭಾ ಮಾಯಪ್ಪ ಪಿರನ್ನವರ ಸುಮಾರು (50) ಎಂಬ ಮಹಿಳೆ ಗೌಡ್ರ ಗಡ್ಡೆ ಬಳಿ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಗ್ರಾಮಸ್ಥರು ತಕ್ಷಣ ಕಾರ್ಯಪ್ರವೃತ್ತರಾಗಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. 

ನಂತರ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್‌ಐ ರಾಜು ಮನಗೂಳಿ ಹಾಗೂ ಪೊಲೀಸ್ ಸಿಬ್ಬಂದಿಗಳು ಮಹಿಳೆಯನ್ನು ವಿಚಾರಣೆ ನಡೆಸಿದ ಬಳಿಕ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತು ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ. 


ಸುದ್ದಿ ಓದಿ