ವಿಜಯಪುರ

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅಧಿಕಾರಿಗಳಿಗೆ ಸೂಚನೆ

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅಧಿಕಾರಿಗಳಿಗೆ ಸೂಚನೆ

ಲೋಕದರ್ಶನ ವರದಿ 

ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ 

ವಿಜಯಪುರ 25: ಪಾಶ್ ಕಾಯ್ದೆ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಈ ಕಾಯ್ದೆಯ ಉದ್ದೇಶ ಸಫಲಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ  ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತಿಯಲ್ಲಿ ಮಂಗಳವಾರ ನಡೆದ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೊಟೇಲ್, ರೆಸಾರ್ಟ್‌ ಮತ್ತಿತರ ಕಡೆಗಳಲ್ಲಿ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಪಾಶ್ ಕಾರ್ಯ ನಿರ್ವಹಿಸುವಂತಾಗಲಿ. ತನ್ಮೂಲಕ ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಆಗಾಗ ಪಾಶ್ ತರಬೇತಿ ಆಯೋಜಿಸಲು ಸಲಹೆ ಮಾಡಿದ  ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಯುವಂತೆ ನೋಡಿಕೊಳ್ಳಬೇಕು ಎಂದೂ ತಾಕೀತು ಮಾಡಿದರು.

ಎಲ್ಲ ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ  ಕಲ್ಪಿಸಲಾಗಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲ ಸೌಲಭ್ಯ ಒದಗಿಸಿರುವುದನ್ನು ಕಾಲಕಾಲಕ್ಕೆ ವಸತಿ ನಿಲಯಕ್ಕೆ ಭೇಟಿ ನೀಡಿ ಪರೀಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. ಆಗ ಮಧ್ಯೆ ಪ್ರವೇಶಿಸಿದ ಡಾ. ನಾಗಲಕ್ಷ್ಮಿ ಚೌಧರಿ ಅವರು, ವಸತಿ ನಿಲಯಗಳಲ್ಲಿ ಬಾಲಕಿಯರಿಗಾಗಿ ಬೇಡಿಕೆ ಬಂದಾಗ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ  ಸೂಚಿಸಿದ ಅವರು, ಮೂಲ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಒದಗಿಸಿ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಜೊತೆಗೆ ವಸತಿ ನಿಲಯದಲ್ಲಿ ಮೆನ್ಯು ಪ್ರಕಾರ ಆಹಾರ ಒದಗಿಸಬೇಕು.

ವಸತಿ ನಿಲಯಗಳ ಸುಧಾರಣೆಗಾಗಿ ಬೇರೆ ಬೇರೆ ಇಲಾಖೆಯಲ್ಲಿರುವ ಅನುದಾನ ಬಳಸಿಕೊಳ್ಳಿ ಎಂದೂ ಸಲಹೆ ಮಾಡಿದರು.ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ಮಾಡಿದ  ಅವರು, ಮಕ್ಕಳೊಂದಿಗೆ ತಾವು ಇತ್ತೀಚೆಗೆ ಸಂವಾದ ಮಾಡಿದಾಗ ಅನೇಕ ಮಕ್ಕಳು ತಮ್ಮ  ಅಹವಾಲು ಹೇಳಿಕೊಂಡಿದ್ದಾರೆ. ಹಾಗಾಗಿ ಮಕ್ಕಳ ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ವೈಯಕ್ತಿಕವಾಗಿ ಶಾಲಾ-ಕಾಲೇಜ್ ಗೆ ತೆರಳಿ ಮಾಹಿತಿ ನೀಡಿ, ಜಾಗೃತಿ ಮೂಡಿಸಬೇಕು. ಜೊತೆಗೆ ಪ್ರಚಾರ ಕೈಗೊಳ್ಳಬೇಕು ಎಂದರು.  ಎಲ್ಲಾ ಕಾಲೇಜಿನಲ್ಲಿ ಮಾಹಿತಿ ಫಲಕ ಅಳವಡಿಸಿ ಬೇರೆ ಬೇರೆ ಇಲಾಖೆಯಲ್ಲಿರುವ ಮಾಹಿತಿಯನ್ನು ಪ್ರಚಾರ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಣ್ಣುಮಕ್ಕಳ ಶಿಕ್ಷಣ ಕುರಿತು ಜಾಗೃತಿ ಮೂಡಿಸಬೇಕು ಎಂದರು.  


ಸುದ್ದಿ ಓದಿ