ಬಳ್ಳಾರಿ

ಮಹಿಳೆಯರ ಆರೋಗ್ಯ ತಪಾಸಣಾ ಶಿಬಿರ

ಮಹಿಳೆಯರ ಆರೋಗ್ಯ ತಪಾಸಣಾ ಶಿಬಿರ

ಬಳ್ಳಾರಿ 28:  ಬಳ್ಳಾರಿಯ ವೆಂಕಟ ಕಾಮಿನೇನಿ ಆಸ್ಪತ್ರೆಯಲ್ಲಿ ಫೆ. 28ರಂದು ಜಿಲ್ಲಾ ಮಹಿಳಾ ಮೋರ್ಚಾದಿಂದ ಅಂತರಾಷ್ಟೀಯ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಮಹಿಳೆಯರ ಆರೋಗ್ಯ ತಪಾಸಣಾ ಶಿಬಿರಕ್ಕೆ ಬಳ್ಳಾರಿ ನಗರ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಹೆಚ್ ಹನುಮಂತಪ್ಪ ಬಳ್ಳಾರಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಾಬಕೊ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರ್ ರೆಡ್ಡಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ವಿಜಯಲಕ್ಷ್ಮೀ ಜಿಲ್ಲಾ ಪೇರೆಂಟ್ ಬಾಡಿಯ ಉಪಾಧ್ಯಕ್ಷರಾದ ಶಶಿಕಲಾ,  ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸುಗುಣಾ ಕೆ, ಸುನಿತಾ, ನಗರಾಧ್ಯಕ್ಷ ಜ್ಯೋತಿ ಪ್ರಕಾಶ್, ಪ್ರಮುಖ ಡಾ.ಅರುಣಾ, ಸಾಧನಾ ಹಿರೇಮಠ, ವಿಜಯಲಕ್ಷ್ಮೀ ಹಾಗೂ ಮಹಿಳಾ ಮೋರ್ಚಾದ ಎಲ್ಲ ಸದಸ್ಯರು, ಪ್ರಮುಖರು ಹಾಜರಿದ್ದರು.

ಸುದ್ದಿ ಓದಿ