ಮಹಿಳಾ ವಿವಿ: ಹಂಗಾಮಿ ಕುಲಪತಿಯಾಗಿ ಪ್ರೊ.ಶಾಂತಾದೇವಿ.ಟಿ. ನೇಮಕ
Women's University: Prof. Shantadevi T as Acting Chancellor. Recruitment
ಮಹಿಳಾ ವಿವಿ: ಹಂಗಾಮಿ ಕುಲಪತಿಯಾಗಿ ಪ್ರೊ.ಶಾಂತಾದೇವಿ.ಟಿ. ನೇಮಕ
ವಿಜಯಪುರ, 24: ಹಾಲಿ ಕುಲಪತಿ ಪ್ರೊ..ಬಿ.ಕೆ.ತುಳಸಿಮಾಲ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಜನೆವರಿ 24ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಶಾಂತಾದೇವಿ ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಥಾವರಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.
ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ಪ್ರೊ.ಬಿ.ಕೆ.ತುಳಸಿಮಾಲ ಅವರು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ. ಅವರಿಗೆ ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ.ಬಿ.ಕೆ.ತುಳಸಿಮಾಲ ಅವರನ್ನು ವಿಶ್ವವಿದ್ಯಾನಿಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರ್, ವಿವಿಧ ವಿಭಾಗಗಳ ಮುಖ್ಯಸ್ಥರು/ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 