ತಾಲೂಕು ಮಟ್ಟದ ಕಬಡ್ಡಿಯಲ್ಲಿ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ
Women's team secures first place in taluk-level Kabaddi
ಲೋಕದರ್ಶನ ವರದಿ
ಬಾಗಲಕೋಟೆ 16: ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬಸವೇಶ್ವರ ಕಲಾ ಮಹಾವಿದ್ಯಾಲಯದ ಮಹಿಳಾ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದೆ. ನಗರದ ನವನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2026ಹಿ27ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮಹಿಳಾ ಕಬಡ್ಡಿ ವಿಭಾಗದಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದವು. ತೀವ್ರ ಪೈಪೋಟಿಯ ನಡುವೆ ಬಸವೇಶ್ವರ ಕಲಾ ಮಹಾವಿದ್ಯಾಲಯದ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.
ಸಾಧನೆಗೈದ ಕ್ರೀಡಾಪಟುಗಳಿಗೆ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ್.ಎನ್.ಅಥಣಿ, ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಸೂಳಿಭಾವಿ, ಪ್ರಾಚಾರ್ಯರಾದ ಎಸ್. ಆರ್. ಮುಗನೂರಮಠ, ದೈಹಿಕ ಶಿಕ್ಷಣ ನಿರ್ದೇಶಕರಾದ ಎಮ್.ಎಮ್ ದೇವನಾಳ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 