ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಮಹಿಳೆಯರದ್ದು: ಎಎಸ್ಪಿ ಲಾವಣ್ಯ

ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಮಹಿಳೆಯರದ್ದು: ಎಎಸ್ಪಿ ಲಾವಣ್ಯ

ಲೋಕದರ್ಶನ ವರದಿ

ಬಳ್ಳಾರಿ 09:ಕಾಲ ಏನೇ ಬದಲಾದರೂ ಜನ ಬದಲಾದರೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಮಹಿಳೆಯರ ಮೇಲಿದೆ ಎಂದು ಹೆಚ್ಚುವರಿ ಎಸ್ಪಿ ಬಿ.ಎನ್.ಲಾವಣ್ಯ ಹೇಳಿದರು. ನಗರದ ಶ್ರೀ ಚೈತನ್ಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸನ್ಮಾರ್ಗ ಗೆಳೆಯರ ಬಳಗ ಮತ್ತು ಶ್ರೀ ಚೈತನ್ಯ ಬಾಲಕಿಯರ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಮಂಗಳವಾರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ರಂಗೋಲಿ ಸ್ಪಧರ್ೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಂಗೋಲಿ ಸ್ಪಧರ್ೆಯಲ್ಲಿ ನಿರೀಕ್ಷೆಗೂ ಮೀರಿ ವಿದ್ಯಾಥರ್ಿಗಳು ಮತ್ತು ಮಹಿಳೆಯರು ಭಾಗವಹಿಸಿರುವುದು ಶ್ಲಾಘನೀಯ. ಇತ್ತೀಚಿನ ದಿನಮಾನಗಳಲ್ಲಿ ಹಬ್ಬದ ವಾತಾವರಣಗಳು ಕಣ್ಮರೆಯಾಗುತ್ತಿವೆ ಎಂಬ ಭಯದಲ್ಲಿ ಯುವತಿಯರು ಮತ್ತು ಮಹಿಳೆಯರು ಇದ್ದಾರೆ. ಆದರೆ, ಇಂತಹದರಲ್ಲೂ ವಿದ್ಯಾಥರ್ಿನಿಯರು ರಂಗೋಲಿ ಸ್ಪಧರ್ೆಯಲ್ಲಿ ಭಾಗವಹಿಸಿರುವುದು ಹೆಮ್ಮೆಯ ಸಂಗತಿ. ಅಲ್ಲದೆ, ಈ ಹಿಂದೆ ನಾವು ಆರು ಚುಕ್ಕೆ ರಂಗೋಲಿ ಹಾಕುವುದೇ ದೊಡ್ಡ ಸಾಧನೆಯಾಗಿತ್ತು. ಆದರೆ, ಈಗಿನ ಯುವತಿಯರು ನೂರು ಚುಕ್ಕೆಯ ರಂಗೋಲಿ ಹಾಕುವ ಮೂಲಕ ರಂಗೋಲಿಗೆ ಹೊಸ ಆಯಾಮವನ್ನು ನೀಡಿದ್ದಾರೆ ಎಂದರು. 

ಬಹುಮಾನ, ಸೋಲು, ಗೆಲುವು ಮುಖ್ಯವಲ್ಲ. ಸ್ಪಧರ್ೆಯಲ್ಲಿ ಭಾಗವಹಿಸುವುದೇ ಮುಖ್ಯ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀ ಚೈತನ್ಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ನಿದರ್ೇಶಕರಾದ ರಾಧಿಕಾ ರಾಧಕೃಷ್ಣ, ಸುಚೇತಾ ಸುರೇಶ್, ರಶ್ಮೀ ಚಂದನ್ಗೋಪಾಲ್, ಪ್ರಜ್ವಲಾ ಹನುಮಂತಪ್ಪ, ಸವಿತಾ ಚಿದಾನಂದ ಎಂ.ಗದಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸ್ಪಧರ್ೆಯಲ್ಲಿ ಸುಮಾರು 80 ಹೆಚ್ಚು ವಿದ್ಯಾಥರ್ಿನಿಯರು ಭಾಗವಹಿಸಿದ್ದರು. ಸನ್ಮಾರ್ಗ ಗೆಳೆಯರ ಬಳಗದ ಚಂದ್ರಶೇಖರ ಆಚಾರ್ ಸ್ವಾಗತಿಸಿದರು. ಶಿಕ್ಷಕ ಮೆಹತಾಬ್ ಕಾರ್ಯಕ್ರಮ ನಿರೂಪಿಸಿದರು. ಬಸವರಾಜ ವಂದಿಸಿದರು. 


ಸುದ್ದಿ ಓದಿ