ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು - ಶೃತಿ ವೈದ್ಯ
Women should come forward in all fields - Shruti Vaidya
ಯರಗಟ್ಟಿ 10 : ಆಧುನಿಕ ತಂತ್ರಜ್ಞಾನ ಯುಗದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದು ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಅವರ ಧರ್ಮಪತ್ನಿ ಶ್ರೀಮತಿ ಶೃತಿ ವಿಶ್ವಾಸ ವೈದ್ಯ ಅವರು ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಳ್ಳೆಯ ವಿದ್ಯಾಭ್ಯಾಸವು ಮಹಿಳಾ ಸಬಲೀಕರಣದ ಮೊದಲ ಹೆಜ್ಜೆಯಾಗಿದೆ ಎಂದು ಪ್ರತಿಪಾದಿಸಿದರು.ಸ್ಥಳೀಯ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಶ್ರೀಮತಿ ಆಶಾ ಪರೀಟ ಅವರು ಮಹಿಳಾ ದಿನಾಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಆರ್. ಎಸ್. ಮರಿಗೌಡರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ವೇಳೆ ವಿಜಯಲಕ್ಷ್ಮಿ ಬದ್ದಿ, ಡಾ. ಸುನಂದಾ ಮಾದರ, ಶಂಕರ ಲಗಳಿ, ಡಾ. ರಾಜಶೇಖರ ಬಿರಾದಾರ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 