ಮಹಿಳೆಯರು ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಬೇಕು: ಶಶಿಕಾಂತ್ ಶಿವಪುರೆ
Women should develop skills and become self-reliant: Shashikant Shivapure
ಬಳ್ಳಾರಿ 20: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದು, ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಮುನ್ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಹೇಳಿದರು.
ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥ ಆವರಣದಲ್ಲಿ ಗ್ರಾಮೀಣ ಮಹಿಳೆಯರಿಗಾಗಿ ಆಯೋಜಿಸಿದ್ದ 35 ದಿನಗಳ ಉಚಿತ ಮಹಿಳಾ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಮಹಿಳೆಯೂ ಕೌಶಲ್ಯ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು. ಸ್ವಂತ ಉದ್ಯೋಗ ಆರಂಭಿಸುವ ಮೂಲಕ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಅವರು ಸಲಹೆ ನೀಡಿದರು.
ಕೆನರಾ ಬ್ಯಾಂಕ್ನ ಜಿಲ್ಲಾ ಲೀಡ್ ವ್ಯವಸ್ಥಾಪಕ ಗೀರೀಶ್ ವಿ. ಕುಲಕರ್ಣಿ ಮಾತನಾಡಿ, ಮಹಿಳಾ ಉದ್ಯಮಿಗಳಿಗೆ ವಿವಿಧ ಬ್ಯಾಂಕ್ಗಳಲ್ಲಿ ಲಭ್ಯವಿರುವ ಸಾಲ ಸೌಲಭ್ಯಗಳು ಹಾಗೂ ಆರ್ಥಿಕ ನೆರವಿನ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್ ಬಿ. ಕೊಳ್ಳೂರಮಠ, ಕೆನರಾ ಬ್ಯಾಂಕ್ ಜಿ.ಪಂ. ಶಾಖೆಯ ವ್ಯವಸ್ಥಾಪಕ ಜಯಕೃಷ್ಣ, ಜಿಲ್ಲಾ ವ್ಯವಸ್ಥಾಪಕರಾದ ರಾಜೇಂದ್ರ ಹಾಗೂ ವಿಜಯ್ ಕುಮಾರ್, ಎನ್ಆರ್ಎಲ್ಎಂ ಸಿಬ್ಬಂದಿ ಉಪಸ್ಥಿತರಿದ್ದರು.
ಸಂಸ್ಥೆಯ ಉಪನ್ಯಾಸಕರಾದ ಜಡೇಪ್ಪ ಜಿ. ಹಾಗೂ ದಿನೇಶ್ ಕುಮಾರ್ ಜಿ., ಸಿಬ್ಬಂದಿಗಳಾದ ಸಿದ್ದಲಿಂಗಮ್ಮ, ಸಂತೋಷ್ ಕುಮಾರ್, ಪರಮೇಶ್ ಹಾಗೂ 35 ಮಂದಿ ಮಹಿಳಾ ತರಬೇತಿದಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 