ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ: ಪ್ರೊ. ವಿಜಯಾ ಕೋರಿಶೆಟ್ಟಿ
Women’s University Gives Priority to Holistic Development of Students: Prof. Vijaya Korishetti
ವಿಜಯಪುರ, ಆ. 19: ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಯ ಜತೆಗೆ ಅವರ ಸಮಗ್ರ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಪ್ರಮುಖ ಆದ್ಯತೆ ನೀಡುತ್ತಿದೆ ಎಂದು ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.
ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 2026–27ನೇ ಸಾಲಿನ ಸ್ನಾತಕೋತ್ತರ ಹಾಗೂ ಪಿಜಿ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ನೂತನ ವಿದ್ಯಾರ್ಥಿನಿಯರ ಪ್ರವೇಶಾತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
2003ರಲ್ಲಿ ಸ್ಥಾಪನೆಯಾದ ವಿಶ್ವವಿದ್ಯಾಲಯವು 281 ಎಕರೆ ವಿಶಾಲ ಕ್ಯಾಂಪಸ್ ಹೊಂದಿದ್ದು, ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಆರೋಗ್ಯ ಕೇಂದ್ರ, ವಸತಿ ನಿಲಯ, ಪ್ಲೇಸ್‌ಮೆಂಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ವಿವಿಧ ವಿದ್ಯಾರ್ಥಿವೇತನ ಸೌಲಭ್ಯಗಳು ಲಭ್ಯವಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣವರ, ಪ್ರವೇಶಾತಿ ಸಮಾಲೋಚನಾ ಅಧ್ಯಕ್ಷ ಪ್ರೊ. ಅಜೀಜ್ ಮಕಾಂದಾರ, ಪ್ರವೇಶಾತಿ ಅಧ್ಯಕ್ಷ ಪ್ರೊ. ಗಂಗಾಧರ ಸೋನಾರ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತ್ತರ ವಿದ್ಯಾರ್ಥಿನಿಯರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 