ಸಂತ್ರಸ್ತರಿಗೆ ಹಕ್ಕುಪತ್ರ, ಇ-ಖಾತಾ ಉತಾರ ವಿತರಣೆ ಪ್ರಾಧಿಕಾರದಲ್ಲಿ ನೀರೀಕ್ಷಿತ ಮಟ್ಟದಲ್ಲಿ ಕೆಲಸ : ತಪಶೆಟ್ಟಿ
Work at the authority distributing rights certificates and e-accounts to victims is at the expected
ಲೋಕದರ್ಶನ ವರದಿ
ಬಾಗಲಕೋಟೆ 13 : ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದಲ್ಲಿ ನೀರೀಕ್ಷಿತ ಮಟ್ಟದಲ್ಲಿ ಕೆಲಸ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಹೇಳಿದರು.
ಬಿಟಿಡಿಎ ಕಚೇರಿ ಆವರಣದಲ್ಲಿ ಶನಿವಾರ ಮುಳುಗಡೆ ವಿವಿಧ ಸಂತ್ರಸ್ತರಿಗೆ ಹಕ್ಕು ಪತ್ರ ಹಾಗೂ ಇ-ಖಾತಾ ಉತಾರಗಳನ್ನು ವಿತರಿಸಿ ಮಾತನಾಡಿದ ಅವರು ಮುಳುಗಡೆ ಸಂತ್ರಸ್ತರಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಪ್ರಾಧಿಕಾರದಲ್ಲಿ ಸಾಕಷ್ಟು ಕೆಲಸಗಳು ಉಳಿಸಿದೆ. ಅವೇಲ್ಲವೂಗಳನ್ನು ನೀರೀಕ್ಷಿತ ಮಟ್ಟದಲ್ಲಿ ಕೆಲಸ ಕಾರ್ಯಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಪ್ರತಿ ದಿನದ ಕೆಲಸ ಕಾರ್ಯಗಳನ್ನು ಪರೀಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಕಚೇರಿ ಆಗಮಿಸಿದ ಪ್ರತಿಯೊಬ್ಬ ಸಂತ್ರಸ್ತರ ದೂರುಗಳಿಗೆ ಸ್ಪಂದಿಸುವ ಮೂಲಕ ತ್ವರಿತಗತಿಯಲ್ಲಿ ಬಗೆಹರಿಸುವ ಕೆಲಸವಾಗಬೇಕು. ಪ್ರಾಧಿಕಾರದ ಸಭೆಯಲ್ಲಿ ಆಗಬೇಕಾದ ಕೆಲಸ, ಯೋಜನೆ ಯಾವ ರೀತಿ ಹಾಕಿಕೊಳ್ಳಬೇಕು ಹಾಗೂ ಇರುವಂತಹ ಕೆಲಸಗಳನ್ನು ಪೂರ್ಣಗಿಳಿಸುವ ಕುರಿತು ಕ್ರಮವಹಿಸಲಾಗುತ್ತಿದೆ. ಇದರ ಜೊತೆಗೆ ಯುನಿಟ್-1 ಮತ್ತು 2ರಲ್ಲಿ ಸ್ವಚ್ಚತೆ ಕಾರ್ಯವನ್ನು ಕೈಗೊಳ್ಳಲಾಗಿದೆ. ಪರಿಸರ ದಿನಾಚರಣೆಯಂದು ಈ ಕಾರ್ಯ ಕೈಗೊಂಡಿದ್ದು, ಇನ್ನು 10 ದಿನಗಳ ವರೆಗೆ ಈ ಸ್ವಚ್ಚತಾ ಅಭಿಯಾನ ಕೂಡಾ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಬಾಗಲಕೋಟೆ ಶಾಸಕ ಉಮೇಶ ಮೇಟಿ ಮಾತನಾಡಿ ಸಂತ್ರಸ್ತರ ನೋವಿಗೆ ಸ್ಪಂದಿಸುವ ಕೆಲಸವಾಗಬೇಕು. ಸಂತ್ರಸ್ತರು ಕಚೇರಿ ಬಂದಾಗ ಅವರೊಂದಿಗೆ ಸಹಾನುಭೂತಿಯಿಂದ ವರ್ತಿಸಿ ಕೆಲಸಗಳನ್ನು ಮಾಡಿಕೊಡಬೇಕು. ಈ ಟೇಬಲ್ಗ ಆ ಟೇಬಲ್ಗೆ ಹೋಗಿ ಎಂದು ಹೇಳಕೂಡದು. ಸಣ್ಣ ಕೆಲಸ ಈರಲಿ ದೊಡ್ಡ ಕೆಲಸವಿರಣಿ ಅಲೇದಾಡುವದನ್ನು ತಪ್ಪಿಸಿ ಅವರ ಸಮಸ್ಯೆಗಳಿಗೆ ಸ್ಪಂಧಿಸುವ ಕಾರ್ಯವಾಗಬೇಕೆಂದು ತಿಳಿಸಿದರು.
ಈ ವೇಳೆ 15 ಸಂತ್ರಸ್ತರಿಗೆ ಹಕ್ಕುಪತ್ರ ಹಾಗೂ 46 ಜನರಿಗೆ ಇ-ಖಾತಾ ಉತಾರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬುಡಾದ ಅಧ್ಯಕ್ಷ ಅಬ್ದುಲ್ರಜಾಜ ಬೇನೂರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅನೀಲ ದಡ್ಡಿ, ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಮುಖ್ಯ ಅಭಿಯಂತರ ಚಂದ್ರಹಾಸ ಬಂಡಿ, ಜಂಟಿ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಪುನರ್ವಸತಿ ಅಧಿಕಾರಿ ಆಗಿರುವ ಪ್ರಶಾಂತ ಬಾರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 