ವಿಜಯಪುರ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ; ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ; ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ; ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ. 

ವಿಜಯಪುರ 05: ಜಿಲ್ಲಾ ಪಂಚಾಯತಿಯ ಸಭಾ ಭವನದಲ್ಲಿ ಬುಧವಾರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ ಮತ್ತು ಸರಕಾರದಿಂದ ಫಲಿತಾಂಶ ಸುಧಾರಣೆಗಾಗಿ ಬಂದಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಫಲಿತಾಂಶ ಸುಧಾರಣೆಗೆ ಶ್ರಮವಹಿಸಿ, ಶೇ.ನೂರರಷ್ಟು ಫಲಿತಾಂಶ ಸುಧಾರಣೆ ಗುರಿಯೊಂದಿಗೆ ಎಲ್ಲರೂ ಶ್ರಮ ವಹಿಸಿ ಎಂದರು.  

ಈ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಹೆಚ್ಚಿನ ಶ್ರಮವಹಿಸಬೇಕು. ಒಂದು ವೇಳೆ  ಫಲಿತಾಂಶ ಕಡಿಮೆಯಾದ್ದಲ್ಲಿ ಅಂತಹ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಫಲಿತಾಂಶ ಸುಧಾರಣೆಗಾಗಿ ಇಲಾಖೆಯ ಎಲ್ಲಾ ಅಧಿಕಾರಿಗಳು ಶ್ರಮವಹಿಸಿ. ಮುಂಬರುವ 20 ದಿನಗಳ ಅವಧಿಯ ಸದುಪಯೋಗ ಪಡಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪುನರ್ ಮನನ, ಮಾದರಿ  ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಸೇರಿ ಇನ್ನಿತರ ಚಟುವಟಿಕೆಗಳನ್ನು ಆಯೋಜಿಸಲು ಸೂಚನೆ ನೀಡಿದರು. ಜೊತೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ, ಯುಪಿಎಸ್, ಸ್ಟೋರೇಜ್ ಡಿವೈಸ್, ಸೂಕ್ತ ಕೊಡಿಗಳ ವ್ಯವಸ್ಥೆ, ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿ ಮೂಲಭೂತ ಸೌಲಭ್ಯಗಳ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು. 

ಜಿ.ಪಂ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಮಾತನಾಡಿ “ಕಡಿಮೆ ಫಲಿತಾಂಶ ಸಾಧಿಸಿರುವ ಪ್ರಾಂಶುಪಾಲರೊಂದಿಗೆ ವಿಶೇಷ ಚರ್ಚೆ ನಡೆಸಿದ ಅವರು ಈ ಬಾರಿ ನೀರೀಕ್ಷಿತ ಪ್ರಮಾಣದ ಗುರಿ ಸಾಧಿಸಲು ಸೂಚಿಸಿದರು. ಕಡಿಮೆ ಫಲಿತಾಂಶ ಇರುವ ಕಾಲೇಜುಗಳಲ್ಲಿ  ಇಚ್ಚಾಶಕ್ತಿ ವಹಿಸಿ ಸುಧಾರಣೆ ಮಾಡಬೇಕು ಎಂದರು.  ಫಲಿತಾಂಶ ಒಂದೇ ರೀತಿಯಾಗಿರಬೇಕು. ಮಕ್ಕಳಲ್ಲಿರುವ ಪರೀ ಭಯ ಹೋಗಲಾಡಿಸಿ, ಬದಲಾವಣೆ ಮಾಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಸೂಚಿಸಿದರು. ವಿದ್ಯಾರ್ಥಿಗಳಿಗೆ ನುರಿತ ವಿಷಯ ತಜ್ಞರಿಂದ   ವಿಶೇಷ ತರಗತಿಗಳನ್ನು ನಡೆಸಲು ಸೂಚಿಸಿದರು. 

ಉಪ ನಿರ್ದೇಶಕರಾದ ಡಾ. ಚಂದ್ರಶೇಖರ ಹೊಸಮನಿ ಅವರು ಮಾತನಾಡಿ, “ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಕುರಿತು ಸಭೆಗೆ ವಿವರಿಸಿದರು. ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕುರಿಗೆ ವಿಷಯವಾರು ಕಾರ್ಯಾಗಾರ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿ ಸೇರಿ ವಿವಿ ಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ ನಿಗದಿತ ಗುರಿಯಂತೆ ಉತ್ತಮ ಪ್ರಗತಿ ಸಾಧಿಸುವದಾಗಿ  ತಿಳಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಪರೀಶೀಲನೆ ಮಾಡಲು ಸಮಿತಿ ರಚಿಸಿದ್ದು,ಆ ಸಮಿತಿಯ ಮೂಲಕ ಮೂಲಭೂತ ಸೌಕರ್ಯಗಳನ್ನು ಪರೀಶೀಲನೆ ಮಾಡಲಾಗುತ್ತಿದೆ ಎಂದರು. ಸಭೆಯಲ್ಲಿ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಪದವಿಪೂರ್ವ  ಕಾಲೇಜುಗಳ ಪ್ರಾಂಶುಪಾಲರು ಹಾಜರಿದ್ದರು. 


ಸುದ್ದಿ ಓದಿ