ಉದ್ಯೋಗಸ್ಥ ಮಹಿಳೆ ಯೋಗ, ಧ್ಯಾನ, ಸಂಗೀತದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಡಾ.ಸಂತೋಷ
Work-life balance workshop for employed women
ಉದ್ಯೋಗಸ್ಥ ಮಹಿಳೆಯರಿಗೆ ಕೆಲಸ-ಜೀವನ ಸಮತೋಲನ ಕಾರ್ಯಾಗಾರ
ವಿಜಯಪುರ 31: ವೃತ್ತಿ ನಿರತ ಮಹಿಳೆ ಒತ್ತಡದ ಬದುಕು ಮತ್ತು ಖಿನ್ನತೆಯಿಂದ ಹೊರಬರಬೇಕಾದರೆ, ಯೋಗ, ಧ್ಯಾನ, ವ್ಯಾಯಾಮ ಮತ್ತು ಸಂಗೀತದಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ವೈದ್ಯಕೀಯ ಮಹಾವಿದ್ಯಾಲಯ ಮನೋಚಿಕಿತ್ಸೆ ಅಧ್ಯಯನ ವಿಭಾಗ ಮತ್ತು ಆಸ್ಪತ್ರೆಯ ವೈದ್ಯ ಡಾ.ಸಂತೋಷ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಕೆಲಸ ಮಾಡುವ ಮಹಿಳೆಯರಿಗಾಗಿ ಕೆಲಸ-ಜೀವನ ಸಮತೋಲನ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂತಹ ಚಟುವಟಿಕೆಗಳು ಮನಸ್ಸಿಗೆ ಶಾಂತಿ, ದೇಹಕ್ಕೆ ಶಕ್ತಿ ಹಾಗೂ ಬದುಕಿಗೆ ಹೊಸ ಉತ್ಸಾಹವನ್ನು ನೀಡುತ್ತವೆ ಎಂದರು.
ಧಾರವಾಡ ಮನೋ ಚಿಕಿತ್ಸಕಿ ಶ್ರೀದೇವಿ ಬಿರಾದಾರ ಮಾತನಾಡಿ, ಉದ್ಯೋಗಸ್ಥ ಮಹಿಳೆ ತಮ್ಮ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕೆಂದರೆ, ತಮಗೋಸ್ಕರ ಸಮಯವನ್ನು ತೆಗೆದುಕೊಳ್ಳಬೇಕು. ಪೋಷಕಾಂಶಯುಕ್ತ ಆಹಾರ ಸೇವನೆ ಹಾಗೂ ಧ್ಯಾನಕ್ಕಾಗಿ ಸಮಯವನ್ನು ಮೀಸಲಿಡಬೇಕು ಎಂದು ಹೇಳಿದರು.
ಶ್ರೀಧರ ದೇಸಾಯಿ ಮಾತನಾಡಿ, ಉದ್ಯೋಗಸ್ಥ ಮಹಿಳೆಯರು ಜೀವನದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ವಿವಿಧ ಕಲಾ ಮತ್ತು ಚಟುವಟಿಕೆಗಳನ್ನು ಕರಗತ ಮಾಡಿಕೊಳ್ಳಬೇಕು ಎಂದರು.
ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕೋಬಾ ನಾರಾಯಣಪ್ಪ ಮತ್ತು ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಪ್ರೊ.ರಾಜಕುಮಾರ ಮಾಲಿಪಾಟೀಲ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಡಾ. ರೂಪಾ ನಾಯಕೋಡಿ ನಿರೂಪಿಸಿದರು ಮತ್ತು ಸಂಶೋಧನಾ ವಿದ್ಯಾರ್ಥಿನಿ ಸರಸ್ವತಿ ಬೆಳ್ಳುಂಡಗಿ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 