ರಾಯಬಾಗ

19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ಡಿ.ಎಂ. ಐಹೊಳೆ

19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ಡಿ.ಎಂ. ಐಹೊಳೆ

ರಾಯಬಾಗ 11: ರಾಯಬಾಗ ವಿಧಾನಸಭಾ ಕ್ಷೇತ್ರದ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಯಡಿ ಈಗಾಗಲೇ ಮೂರು ಪಂಪ್ಮೋಟಾರ್ಗಳನ್ನು ಚಾಲನೆ ಮಾಡಲಾಗಿದ್ದು, ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ನೀರು ಹರಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕ ಡಿ.ಎಂ. ಐಹೊಳೆ ತಿಳಿಸಿದರು.  

ತಾಲ್ಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಪರೀಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಡಿಸೆಂಬರ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಯೋಜನೆಗೆ ಚಾಲನೆ ನೀಡಿದ್ದರು.

ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅದರಂತೆ ಪಂಪ್ಮೋಟಾರ್ಗಳನ್ನು ಕಾರ್ಯಾರಂಭಗೊಳಿಸಿ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ ಎಂದರು.  

ಕೆರೆಗಳು ತುಂಬುವುದರಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಅಂತರ್ಜಲ ಮಟ್ಟವೂ ಹೆಚ್ಚಳವಾಗಲಿದೆ. ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಗ್ರಾಮಗಳಿಗೆ ಈ ಯೋಜನೆ ವರದಾನವಾಗಲಿದೆ ಎಂದು ಹೇಳಿದರು.  


ಸುದ್ದಿ ಓದಿ