ಗದಗ 13: ಆಡಳಿತವೆಂಬುದು ಒಂದು ಬಂಡಿಯ ಎರಡು ಗಾಲಿಗಳಿದ್ದಂತೆ ಒಂದು ಶಾಸಕಾಂಗ ಇನ್ನೊಂದು ನ್ಯಾಯಾಂಗವಾಗಿದೆ ಅದಕ್ಕೆ ಅದರದೇ ಆದಂತಹ ಗೌರವ ಇರುವುದರಿಂದ ಅಧಿಕಾರಿಗಳು ತಮಗೆ ವಹಿಸಿದ ಕೆಲಸದಲ್ಲಿ ನಿರತರಾಗಿ ಕೆಲಸವನ್ನು ಪೂರ್ಣಗೊಳಿಸಿ ಎಂದು ಗಣಿ ಮತ್ತು ಭೂ ವಿಜ್ಞಾನ, ಅರಣ್ಯ, ಜೀವಿಶಾಸ್ತ್ರ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ನುಡಿದರು.
ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಅವರು ಮಾತನಾಡಿದರು.
ಸಕರ್ಾರ ಬದಲಾದಂತಹ ಸಂದರ್ಭದಲ್ಲಿ ಆಯಾ ಸರಕಾರದ ಪ್ರಣಾಳಿಕೆ ಅವಲಂಬಿಸಿ ಸಚಿವರ ದೃಷ್ಟಿಕೋನದಲ್ಲಿ ಬದಲಾವಣೆ ಇರುತ್ತೇ. ಮುಖ್ಯಮಂತ್ರಿಗಳ ನಿದರ್ೇಶನದಂತೆ ಸಚಿವರು ಕೆಲಸವನ್ನು ಮಾಡುತ್ತಾರೆ. ಅದಕ್ಕೆ ಪೂರಕವಾಗಿ ಆಡಳಿತ ವರ್ಗದ ಎಲ್ಲಾ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಮರಳುಗಾರಿಕೆ, ಗಣಿಗಾರಿಕೆ ಕುರಿತಂತೆ ಅಕ್ರಮಗಳ ಕುರಿತು ದೂರುಗಳು ಬಂದಿದ್ದರ ಹಿನ್ನೆಲೆಯಲ್ಲಿ ಇಲಾಖೆಯಿಂದ ವಿಶೇಷ ತನಿಖಾ ತಂಡಗಳನ್ನು ರಚಿಸಿ ಸತ್ಯಾಸತ್ಯತೆಯ ಪರಿಶೀಲನೆ ನಡೆಸಲಾಗುತ್ತಿದ್ದು ಅಕ್ರಮ ನಡೆವ ಪ್ರಕರಣಗಳಲ್ಲಿ ನಿದರ್ಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಅರಣ್ಯ, ಜೀವಿಶಾಸ್ತ್ರ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ನುಡಿದರು.
ಅನುಮತಿಗಿಂತ ಲಾರಿಗಳು ಓವರ ಲೋಡ ಹಾಗೂ ಒಂದೇ ತಾಸಿನಲ್ಲಿ ಹಲವಾರು ಬಾರಿ ಮರಳು ಸಾಗಾಣಿಕೆ ದೂರುಗಳಿವೆ. ಸಂಬಂಧಿತ ತಾಲೂಕಿನ ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ ಅಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಸಿಬ್ಬಂದಿ ಈ ಕುರಿತು ತೀವ್ರ ನಿಗಾ ವಹಿಸಬೇಕು. ಗ್ರಾಮ ಪಂಚಾಯತ್ ಪಿಡಿಓಗಳು ತಮ್ಮ ಮೊಬೈಲ್ನ್ನು ಚಾಲ್ತಿಯಲ್ಲಿಟ್ಟಿರಬೇಕು. ಜಿಲ್ಲಾ ಉಪವಿಭಾಗಾಧಿಕಾರಿ ಹಾಗೂ ತಾಲೂಕು ದಂಡಾಧಿಕಾರಿಗಳ ಗಮನಕ್ಕೆ ಅಕ್ರಮ ಕುರಿತಂತೆ ಗಮನ ತಂದು ಯಾವುದೇ ಪ್ರಭಾವಕ್ಕೆ ಒಳಗಾಗದೇ ಕಾನೂನು ಕ್ರಮ ಜರುಗಿಸಲು ಸಚಿವ ಸಿ.ಸಿ.ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ, ನೆರೆ ಸಂತ್ರಸ್ಥರಿಗೆ ಮನೆ ಇತರೆ ಸೌಲಭ್ಯಗಳನ್ನು ಒದಗಿಸಬೇಕು. ಎ ಕೆಟಗರಿಯ 400 ಫಲಾನುಭವಿಗಳಿಗೆ ತಲಾ 1ಲಕ್ಷ ರೂ. ನೀಡಿದ್ದು ಮನೆ ಕಾಮಗಾರಿ ಆರಂಭಿಸಲು ಅಧಿಕಾರಿಗಳು ಫಲಾನುಭವಿಗಳಿಗೆ ತಿಳಿಸಿ ಮನೆ ಕಟ್ಟುವ ಕಾರ್ಯ ಆರಂಭಿಸಬೇಕು. ಎಲ್ಲ ಇಲಾಖೆ ಅಧಿಕಾರಿಗಳು ಸಕರ್ಾರಿ ಕೆಲಸದಲ್ಲಿ ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.