ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸ ಮಾಡಿ: ನ್ಯಾ.ಪುಷ್ಪಾಂಜಲಿ ದೇವಿ
ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ
ಬಳ್ಳಾರಿ 12 : ಕೆಲಸದಲ್ಲಿ ತೊಡಗಿದ ಮಕ್ಕಳನ್ನು ಗುರುತಿಸಬೇಕು ಹಾಗೂ ಎಲ್ಲೇ ಕಂಡುಬಂದರೂ ವರದಿ ಮಾಡಬೇಕು. ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ, ವಿವಿಧ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘ಖಠಚಿಟ ಎಣಛಿಜ ಜಿಠ ಚಿಟಟ ಇಟಿಜ ಅಟಜ ಐಚಿಛಠಡಿ’ ಎಂಬ ಘೋಷವ್ಯಾಕ್ಯದೊಂದಗೆ ಸೋಮವಾರದಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ತರಬೇತಿ ಶಿಕ್ಷಣ ಸಂಸ್ಥೆ ಬಳಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಮೂಡಿಸುವ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಕಾನೂನು ಬಾಹಿರವಾಗಿ ಮಕ್ಕಳನ್ನು ದುಡಿಸಿಕೊಳ್ಳುವಂತಿಲ್ಲ. ಈ ಮೂಲಕ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಎಷ್ಟೇ ಬಡತನ ಇದ್ದರೂ ಮಕ್ಕಳು ಕಾರ್ಮಿಕರಾಗಿ ದುಡಿಯದೇ ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಪ್ರಜೆಯಾಗಿ ಹೊರಹೊಮ್ಮಬೇಕು ಎಂದರು.
ಜಾಥಾವು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಆವರಣದಿಂದ ಆರಂಭವಾಗಿ ರೇಡಿಯೋ ಪಾರ್ಕ್‌ನಿಂದ ಕೌಲ್‌ಬಜಾರ್ ಪೊಲೀಸ್ ಠಾಣೆಯ ಮೂಲಕ ಬಾಬಾ ಜಗನ್‌ಜೀವನ್‌ರಾಂ ಭವನದ ವೇದಿಕೆ ಕಾರ್ಯಕ್ರಮದವರೆಗೆ ತಲುಪಿತು.
ವೇದಿಕೆ ಕಾರ್ಯಕ್ರಮ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ಬಾಬಾ ಜಗನ್‌ಜೀವನ್‌ರಾಂ ಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ ಅವರು ಉದ್ಘಾಟಿಸಿದರು.
ಮಾತನಾಡಿದ ಅವರು, ಶಿಕ್ಷಣ ಎಂಬುದು ಪ್ರತಿಯೊಂದು ಮಗುವಿನ ಹಕ್ಕು; ಪ್ರತಿಯೊಂದು ಮಗುವಿಗೂ ಕೂಡ ಶಿಕ್ಷಣ ಒದಗಿಸಬೇಕು. ಪ್ರತಿಯೊಂದು ಮಗುವನ್ನು ತಮ್ಮ ಮಗುವೆಂದು ಪರಿಭಾವಿಸಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕೆಲಸ ಮಾಡಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲಾ ಸೌಲಭ್ಯ ನೀಡಿದ್ದರೂ, ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಹೊಂದುತ್ತಿದ್ದಾರೆ. ಸರ್ಕಾರಿ ಸೌಲಭ್ಯ ಪಡೆದುಕೊಂಡು ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ 18 ವರ್ಷ ಒಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದಿಲ್ಲ ಎಂಬ ಪ್ರತಿಜ್ಞಾವಿಧಿ ಬೋಧಿಸಿದರು.
ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಸದಸ್ಯರು ಹಾಗೂ ವಕೀರಾದ ತ್ರಿವೇಣಿ ಆರ್.ಪತ್ತಾರ್ ಅವರು ಕಾರ್ಯಕ್ರಮದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಮೌನೇಶ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ತಹಶೀಲ್ದಾರ ಬಲರಾಮ ಕಟ್ಟಿಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎರಿ್ರಗೌಡ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ರವೀಂದ್ರನಾಥ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಗಣ್ಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.