ಆಯತಪ್ಪಿ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ
Worker dies, two others seriously injured after falling off a bridge
ಬೆಳಗಾವಿ 03: ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಮೂವರು ಮೇಲಿನಿಂದ ಕೆಳಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ನಡೆದಿದೆ.
ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿನ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಮೃತನನ್ನು ರಮೇಶ ಕಾಮ್ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿರುವ ನಂದಕುಮಾರ್, ರಮೇಶ್ ಮಹೇಂದ್ರ ರಾಮ್ ಎಂಬಿಬ್ಬರು ಕಾರ್ಮಿಕರನ್ನು ಬಾಗಲಕೋಟ ಜಿಲ್ಲೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಹಾರ ಮೂಲದ ಕಾರ್ಮಿಕರು ಮೂಡಲಗಿಯ ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಮಿಕ ಸಾವನ್ನಪ್ಪಿರುವ ಮಾಹಿತಿ ಸಿಗುತ್ತಿದ್ದಂತೆಯೇ ಕಾರ್ಮಿಕರು ಸೆಕ್ಯೂರಿಟಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕುಲಗೋಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಕುಲಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 