ಚಿಕ್ಕೋಡಿ

ಕಾರ್ಮಿಕರು ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಶಾಸಕ ದುರ್ಯೋಧನ ಐಹೊಳೆ

ಕಾರ್ಮಿಕರು ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಶಾಸಕ ದುರ್ಯೋಧನ ಐಹೊಳೆ

ಚಿಕ್ಕೋಡಿ 04 : ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.   ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಾಗರಮುನ್ನೋಳ್ಳಿ ಹೋಬಳಿ ವ್ಯಾಪ್ತಿಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಮಿಕ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.     ಕಾರ್ಮಿಕರು ಸರ್ಕಾರದ ನಿಯಮಾನುಸಾರ ನೋಂದಣಿ ಮಾಡಿಕೊಂಡು ಕಾರ್ಮಿಕ ಕಲ್ಯಾಣ ಮಂಡಳಿಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು.

ಪಿಂಚಣಿ, ಕುಟುಂಬ ಪಿಂಚಣಿ, ಟೂಲ್ ಕಿಟ್, ಹೆರಿಗೆ ಸಹಾಯಧನ, ಶೈಕ್ಷಣಿಕ ನೆರವು, ವೈದ್ಯಕೀಯ ಸಹಾಯ, ಅಪಘಾತ ಪರಿಹಾರ, ಮದುವೆ ಸಹಾಯಧನ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಅರ್ಹರು ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.   ಯುವ ಮುಖಂಡರಾದ ಲಕ್ಷ್ಮಣ ಪೂಜೇರಿ ಹಾಗೂ ರಮೇಶ ಕಾಳನ್ನವರ ಮಾತನಾಡಿ, ಕಾರ್ಮಿಕರು ಹಾಗೂ ರೈತರ ಹಿತಕ್ಕಾಗಿ ಶಾಸಕ ದುರ್ಯೋಧನ ಐಹೊಳೆ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಹೇಳಿದರು.   ಕಾರ್ಮಿಕ ಕಲ್ಯಾಣ ಅಧಿಕಾರಿ ಸೋಮಪ್ಪ ನೆನಸಗಿ ಅವರು ಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.  ಈ ಸಂದರ್ಭದಲ್ಲಿ ಸುರೇಶ್ ಬೆಲ್ಲದ, ಸಿದ್ದು ಖಿಂಡಿ, ರಾಜು ಹರಗನ್ನವರ, ಹಸನ್ ಸನದಿ, ರಾಮಗೌಡ ಪಾಟೀಲ ಸೇರಿದಂತೆ ಹಲವು ಗಣ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು. 


ಸುದ್ದಿ ಓದಿ