ಶಿಗ್ಗಾವ್

ಹರ್ ಘರ್ ತಿರಂಗಾ ಯಶಸ್ವಿಗೊಳಿಸಲು ಕಾರ್ಯಪ್ರವೃತ್ತರಾಗಿದ್ದೇವೆ: ಡಾ. ಹನುಮಂತಪ್ಪ

ಹರ್ ಘರ್ ತಿರಂಗಾ ಯಶಸ್ವಿಗೊಳಿಸಲು ಕಾರ್ಯಪ್ರವೃತ್ತರಾಗಿದ್ದೇವೆ: ಡಾ. ಹನುಮಂತಪ್ಪ

ಶಿಗ್ಗಾವಿ 13ಃ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಭಕ್ತಿ ಪ್ರದರ್ಶಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಲು ಅಭಿಯಾನಕ್ಕೆ ಪೂರಕವಾಗಿ ರಾಜ್ಯ ಸರ್ಕಾರದ ಸರಕಾರಿ ನೌಕರರು ಸಕ್ರೀಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಲು ಕಾರ್ಯಪ್ರವೃತ್ತರಾಗಿದ್ದೇವೆ ಎಂದು  ಆಡಳಿತ ವೈದ್ಯಾಧಿಕಾರಿ ಡಾ. ಹನುಮಂತಪ್ಪ ಪಿ ಹೆಚ್ ಹೇಳಿದರು. 

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶಿಗ್ಗಾವಿಯಲ್ಲಿ ದ್ವಜಾರೋಹಣ ಮಾಡಿ ಹಾಗೂ ದ್ವಜದ ಮಹತ್ವದ ಬಗ್ಗೆ ಮಾತನಾಡಿ ಭಾರತ ಸ್ವಾತಂತ್ರ್ಯದ 75 ರ ಸಂಭ್ರವನ್ನು ವೈವಿಧ್ಯಮಯವಾಗಿ ಹಾಗೂ ವಿಶಿಷ್ಟವಾಗಿ ಆಚರಿಸುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು “ಹರ್ ಘರ್ ತಿರಂಗಾ” ಎಂಬ ಘೋಷವಾಕ್ಯದೊಂದಿಗೆ 2022ರ ಅಗಸ್ಟ 13 ರಿಂದ 15ರ ವರೆಗೆ ಪ್ರತಿ ಮನೆಯಲ್ಲೂ ಹಾಗೂ ಸರಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಭಕ್ತಿ ಪ್ರದರ್ಶಿಸಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಲು ಅಲ್ಲದೇ ಸರ್ಕಾರಿ ಅಧಿಕಾರಿಗಳು, ನೌಕರರು ಪ್ರತಿ ಮನೆ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ಎಲ್ಲ ನಾಗರಿಕರನ್ನು ಪ್ರೇರೆಪಿಸಿ ರಾಷ್ಟ್ರೀಯ ಭಾವಕ್ಯತೆಯ ಅರಿವುಮೂಡಿಸಿಸುವದರ ಮೂಲಕ ದೇಶ ಭಕ್ತಿ ರಾಷ್ಟ್ರ ಪ್ರೇಮ ಹಾಗೂ ರಾಷ್ಟ್ರಾಭಿಮಾನವನ್ನು ಅಭಿವ್ಯಕ್ತಗೋಳಿಸಿ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಗಳು, ನೌಕರರು ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. 

ಆಸ್ಪತ್ರೆಯ ಎಲ್ಲ ತಜ್ಞ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 


ಸುದ್ದಿ ಓದಿ