ಹೂವಿನ ಹಡಗಲಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಕಾರ್ಯಾಗಾರ: ಎ.ಕೋಟೆಪ್ಪ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಕಾರ್ಯಾಗಾರ: ಎ.ಕೋಟೆಪ್ಪ

ಲೋಕದರ್ಶನ ವರದಿ 


ಹೂವಿನಹಡಗಲಿ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರಮುಖ ಘಟ್ಟ ಫಲಿತಾಂಶ ಸುಧಾರಣೆಗಾಗಿ ಇಲಾಖೆ ಕಾರ್ಯಾಗಾರ ಹಮ್ಮಿಕೊಂಡಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಹೇಳಿದರು. 

ತಾಲೂಕಿನ ಕೊಂಬಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ಬಿಇಒ ಆರ್‌ಸಿ ಕಚೇರಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಇಂಗ್ಲೀಷ ಹಿಂದಿ ವಿಷಯ ಶಿಕ್ಷಕರ ವೇದಿಕೆ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. 

ಎಸ್‌ಎಸ್‌ಎಲ್‌ಸಿ ಪಾಲಕರ ಸಭೆ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ನೀಡಬೇಕು ಜತೆಗೆ ಗಣಿತ,ವಿಜ್ಞಾನ ಮತ್ತು ಇಂಗ್ಲೀಷ ಗಳಿಗೆ ಹೆಚ್ಚಿನ ಆದ್ಯತೆ ನೀಡಿರಿ ಎಂದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಪಿ.ಪ್ರಕಾಶ್ ,ಸಹ ಶಿಕ್ಷಕ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಶೇಖ್ ಅಹಮದ್, ಎಲ್‌.ಖಾದರಭಾಷಾ ಇದ್ದರು. 

ವಸತಿ ಶಾಲೆ ಪ್ರಾಂಶುಪಾಲರಾದ ಹಂಪಮ್ಮ ಅಧ್ಯಕ್ಷತೆ ವಹಿಸಿದ್ದರು. ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ಕಾರ್ಯಾಗಾರ ಮಾಹಿತಿ ಹಂಚಿಕೊಂಡರು. ಬಿಆರ್‌ಪಿ ಕಾಶಿ ವಿಶ್ವನಾಥ ಸ್ವಾಗತಿಸಿದರು. ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ಪ್ರೌಢಶಾಲೆಗಳ ಇಂಗ್ಲೀಷ,ಹಿಂದಿ ವಿಷಯ ಶಿಕ್ಷಕರು ಇದ್ದರು. 


ಸುದ್ದಿ ಓದಿ