ಧಾರವಾಡ - ಹುಬ್ಬಳ್ಳಿ

ಸೆ. 21 ರಂದು ಭೂ ಕಬಳಿಕೆ ನಿಷೇಧ ಅಧಿನಿಯಮ, ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಕಾರ್ಯಾಗಾರ

ಸೆ. 21 ರಂದು ಭೂ ಕಬಳಿಕೆ ನಿಷೇಧ ಅಧಿನಿಯಮ, ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಕಾರ್ಯಾಗಾರ

ಧಾರವಾಡ 20: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಸೆಪ್ಟೆಂಬರ್ 21, 2024 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 

 ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.  

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ರಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಭಾಗವಹಿಸುವರು.  

ಪ್ರಥಮ ಅಧಿವೇಶನ: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ 2011 ಮತ್ತು ತಿದ್ದುಪಡಿಕಾಯ್ದೆಯ ಕುರಿತು ಮೊದಲನೇ ಭಾಗದ ಉಪನ್ಯಾಸವನ್ನು ಮಾಡುವರು. ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಜಗದೀಶ ರೂಗಿ ಅವರು ಮೋಜಿಣಿ ಮತ್ತು ನಿಯಮಗಳ ವಿಷಯದ ಕುರಿತು ಎರಡನೇ ಭಾಗದ ಉಪನ್ಯಾಸವನ್ನು ಮಾಡುವರು.  

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ ಅವರು ಪ್ರಥಮ ಅಧಿವೇಶನದ ಅಧ್ಯಕ್ಷತೆ ವಹಿಸುವರು. ಉಪವಿಭಾಗಾಧಿಕಾರಿ ಶಾಲಂ ಹುಸೇನ ಮತ್ತು ಭೂದಾಖಲೆಗಳ ಉಪನಿರ್ದೇಶಕ ಮೋಹನ ಶಿವಣ್ಣನವರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತಿ ವಹಿಸುವರು.  

ದ್ವಿತೀಯ ಅಧಿವೇಶನ: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯ ಎಸ್‌. ಪಾಲಯ್ಯ ಅವರು ಕರ್ನಾಟಕ ಭೂ ಕಂದಾಯ ಅಧಿನಿಯಮ ಕಲಂ ನಂ 192(ಎ) ವಿಷಯದ ಕುರಿತು ಮೊದಲನೇ ಭಾಗದ ಉಪನ್ಯಾಸವನ್ನು ಮಾಡುವರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಅವರು ಮುನಿಸಿಪಲ್ ಕಾರ​‍್ೋರೇಶನ್, ಪಂಚಾಯತ್ ಆಸ್ತಿಗಳ ಒತ್ತುವರಿ ಮತ್ತು ತೆರವುಗೊಳಿಸಲು ಇರುವ ಕಾನೂನು ಪ್ರಕ್ರಿಯೆಗಳು ವಿಷಯ ಕುರಿತು ಎರಡನೇ ಭಾಗದ ಉಪನ್ಯಾಸವನ್ನು ಮಾಡುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿಗಳ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಅವರು ಕೆರೆ ಒತ್ತುವರಿ ಮತ್ತು ತೆರವುಗೊಳಿಸಲು ಇರುವ ಕಾನೂನು ಪ್ರಕ್ರಿಯೆ ವಿಷಯದ ಕುರಿತು ಮೂರನೇ ಭಾಗದ ಉಪನ್ಯಾಸವನ್ನು ಮಾಡುವರು.  

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯ ಕೆ.ಹೆಚ್‌.ಅಶ್ವತ್ಥನಾರಾಯಣಗೌಡ ಅವರು ದ್ವಿತೀಯ ಅಧಿವೇಶನದ ಅಧ್ಯಕ್ಷತೆ ವಹಿಸುವರು. ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಸಂತೋಷ ಬಿರಾದಾರ ಅವರು ಉಪಸ್ಥಿತಿ ವಹಿಸುವರು. 

ತೃತೀಯ ಅಧಿವೇಶನ: ನಿವೃತ್ತ ಉಪ ಅರಣ್ಯ ಸಂರಕ್ಷಾಧಿಕಾರಿ ಸಿ.ಎಂ. ಆಮ್ಮನವರ ಅವರು ಅರಣ್ಯ ಇಲಾಖೆಯ ಆಸ್ತಿಳ ಒತ್ತುವರಿ ಮತ್ತು ತೆರವುಗೊಳಿಸಲು ಇರುವ ಕಾನೂನು ಪ್ರಕ್ರಿಯೆ ವಿಷಯದ ಕುರಿತು ಮೊದಲನೇ ಭಾಗದ ಉಪನ್ಯಾಸವನ್ನು ಮಾಡುವರು. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ವಿಲೇಖನಾಧಿಕಾರಿ ಹೆಚ್‌.ಕೆ.ನವೀನ ಅವರು ಮುಜರಾಯಿ ಇಲಾಖೆ ಮತ್ತು ವಕ್ಫ್‌ ಆಸ್ತಿಗಳ ಒತ್ತುವರಿ ಮತ್ತು ತೆರವುಗೊಳಿಸಲು ಇರುವ ಕಾನೂನು ಪ್ರಕ್ರಿಯೆಗಳು ವಿಷಯದ ಕುರಿತು ಎರಡನೇ ಭಾಗದ ಉಪನ್ಯಾಸವನ್ನು ಮಾಡುವರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶ ಕುಮಾರ ಅವರು ತೃತೀಯ ಅಧಿವೇಶನದ ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಭರಮನೆ ಅವರು ಕಾರ್ಯಕ್ರಮದ ಉಪಸ್ಥಿತಿ ವಹಿಸುವರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಚರ್ಚೆ ಮತ್ತು ವಿಮರ್ಶೆ ನಡೆಯುವುದು ಎಂದು ಕ.ಭೂ.ಕ.ನಿ ವಿಶೇಷ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ವಿಲೇಖನಾಧಿಕಾರಿ ಹೆಚ್‌.ಕೆ.ನವೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ