ವಿಶ್ವ ಸ್ತನ್ಯಪಾನ ಸಪ್ತಾಹ: ಮಗುವಿನ ಆರೋಗ್ಯಕ್ಕೆ ತಾಯಿಯ ಹಾಲೇ ಅಮೃತ - ಎಸ್.ಡಿ. ಬೆನ್ನೂರ
World Breastfeeding Week: Mother's Milk is Nectar for a Baby's Health – S.D. Bennur
ಗದಗ 5: ತಾಯಿಯ ಎದೆಹಾಲು ಮಗುವಿಗೆ ಅಮೃತದಷ್ಟೇ ಅಮೂಲ್ಯವಾಗಿದ್ದು, ಮಗು ಬಯಸಿದಾಗಲೆಲ್ಲಾ ಯಾವುದೇ ಸಿದ್ಧತೆ ಇಲ್ಲದೆ ನೀಡಬಹುದಾದ ಸಂಪೂರ್ಣ ಪೌಷ್ಟಿಕ ಆಹಾರವಾಗಿದೆ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.
ತಾಲೂಕಿನ ಹೊಂಬಳ ಗ್ರಾಮದ 9ನೇ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ವರ್ಷದ ಘೋಷವಾಕ್ಯವಾದ "ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ" ಎಂಬ ಸಂದೇಶದಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಗುವಿನ ಜನನವಾದ ಒಂದು ಗಂಟೆಯೊಳಗೆ ಸ್ತನ್ಯಪಾನ ಆರಂಭಿಸುವುದು ಹಾಗೂ ಮೊದಲ ಆರು ತಿಂಗಳವರೆಗೆ ತಾಯಿಯ ಹಾಲನ್ನೇ ಮಾತ್ರ ನೀಡುವುದು ಅತ್ಯಂತ ಮುಖ್ಯ ಎಂದು ಅವರು ತಿಳಿಸಿದರು.
ಸ್ತನ್ಯಪಾನವು ಮಗುವಿನ ಉತ್ತಮ ಬೆಳವಣಿಗೆ, ರೋಗನಿರೋಧಕ ಶಕ್ತಿ ವೃದ್ಧಿ ಹಾಗೂ ಸಮರ್ಕ ಪೌಷ್ಟಿಕಾಂಶಕ್ಕೆ ನೆರವಾಗುತ್ತದೆ. ಜೊತೆಗೆ ತಾಯಿ-ಮಗುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆರು ತಿಂಗಳ ನಂತರ ಪೂರಕ ಆಹಾರ ಆರಂಭಿಸಿದರೂ, ಮಗುವಿಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ತಾಯಿಯ ಹಾಲು ನೀಡಬೇಕು ಎಂದು ಸಲಹೆ ನೀಡಿದರು.
ನಂತರ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಎಲ್.ಎಫ್. ನಾಶಿ ಮಾತನಾಡಿ, ಆರೋಗ್ಯವಂತ ತಾಯಿಯಿಂದ ಆರೋಗ್ಯವಂತ ಮಗುವನ್ನು ಪಡೆಯಲು ಗರ್ಭಿಣಿಯರು ನಿಗದಿತ ಅವಧಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಹಾಗೂ ವೈದ್ಯರ ಸಲಹೆ ಪಾಲಿಸುವುದು ಅಗತ್ಯ ಎಂದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅನಿಸಾ ಎಚ್. ವೈ. ಅವರು ತಾಯಂದಿರಿಗೆ ಸರಿಯಾದ ರೀತಿಯಲ್ಲಿ ಮಗುವಿಗೆ ಹಾಲುಣಿಸುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಆರ್.ಎಸ್. ಹನಸಿ, ಆಶಾ ಕಾರ್ಯಕರ್ತೆ ಕೆ.ಟಿ. ಕೇಮಾವಿ, ಬಿ.ಡಿ. ಕಾವೇರಿ, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ತಾಯಂದಿರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 