ರಾಣೆಬೆನ್ನೂರ

ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ

ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ

ಲೋಕದರ್ಶನ ವರದಿ 


ರಾಣಿಬೆನ್ನೂರ 10:  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಆರೋಗ್ಯ ರಕ್ಷಣೆಗಾಗಿ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿವೆ. ಜನರು ದುರಭ್ಯಾಸದಿಂದ ದೂರವಿದ್ದು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.  

  ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಏರಿ​‍್ಡಸಲಾಗಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

    ಎನ್‌ಸಿಡಿ ವಿಭಾಗದ ವೈದ್ಯ ಡಾಽ ರುದ್ರಮೂರ್ತಿ ಮಾತನಾಡಿ, ವಿಶ್ವದ ಎಲ್ಲಾ ಕಾಯಿಲೆಗಳಲ್ಲಿ ಕ್ಯಾನ್ಸರ್ ರೋಗವು ಅತ್ಯಂತ ಮಾರಕವಾಗಿದ್ದು ಧೂಮಪಾನ, ಮದ್ಯಪಾನದಂತಹ ದುಶ್ಚಟಗಳಿಂದ ದೂರವಿದ್ದರೆ ಅದು ಬಾರದಂತೆ ತಡೆಗಟ್ಟಬಹುದಾಗಿದೆ. ಕ್ಯಾನ್ಸರ್ ಅರಿವೇ ಮೊದಲ ಚಿಕಿತ್ಸೆಯಾಗಿದ್ದು ರೋಗದ ಪ್ರಾರಂಭದ ಹಂತದಲ್ಲಿಯೇ ಅದನ್ನು ಗುರುತಿಸಿದಲ್ಲಿ ಜೀವ ಉಳಿಯುತ್ತದೆ ಎಂದರು.  

     ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಜಿಪಂ ಮಾಜಿ ಅಧ್ಯಕ್ಷ ಮಂಜುನಾಥ ಓಲೇಕಾರ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂತೋಷ ಜಿ, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪರಮೇಶ್ವರ​‍್ಪ, ಡಾ. ರಾಜು ಶಿರೂರ, ಡಾ.ಕಿರಣ ನಾಡಿಗೇರ, ನಾಗರಾಜ ಕುಡಪಲಿ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಪಾಲ್ಗೊಂಡಿದ್ದರು. 


ಸುದ್ದಿ ಓದಿ