ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನಾಚರಣೆ: ಮಕ್ಕಳ ಸುರಕ್ಷತೆಗೆ ಜಾಗೃತಿ ಅಗತ್ಯ
World Day Against Trafficking in Persons: Awareness Needed for Child Safety
ಲೋಕದರ್ಶನ ವರದಿ
ಗದಗ, ಜು.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ್ತು್ಣೂಸ್ಘ್ಪಾಹಿ2026 ಅಂಗವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಉದ್ಘಾಟಿಸಿ ಮಾತನಾಡಿ, ಮಕ್ಕಳ ಕಳ್ಳಸಾಗಣೆ ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ವಿಶೇಷ ನಿಗಾ ವಹಿಸಬೇಕಿದೆ ಎಂದು ಹೇಳಿದರು. ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ದೊರೆಯುವಂತೆ ಪೋಷಕರು ಮತ್ತು ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಮಕ್ಕಳನ್ನು ಭಿಕ್ಷಾಟನೆ, ಮಾದಕ ವಸ್ತು ಸಾಗಾಟ ಸೇರಿದಂತೆ ವಿವಿಧ ದುಷ್ಕೃತ್ಯಗಳಿಗೆ ಬಳಸುವುದು ಮಾನವ ಕಳ್ಳಸಾಗಣೆಯ ಭಾಗವಾಗಿದ್ದು, ಇಂತಹ ಪ್ರಕರಣಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೈಲಿನಲ್ಲಿರುವ ಅಪ್ರಾಪ್ತರ ಪರಿಸ್ಥಿತಿ, ಬಾಲ್ಯವಿವಾಹ, ಪೊಕ್ಸೊ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಮುತುರಾಜ ಖಾದ್ರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಮಕ್ಕಳು ಹಾಗೂ ವಿದ್ಯಾರ್ಥಿಗಳು ಅಪರಿಚಿತರ ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಯಾವುದೇ ಅನುಮಾನಾಸ್ಪದ ಘಟನೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಸಲಹೆ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜಯದೇವಿ ಕವಲೂರು ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಕಳ್ಳಸಾಗಣೆ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಜಿ. ಮಣ್ಣೂರು ಅವರು "ಖಿಡಿಚಿಠಿ ಃಜಟಿಜ ಣಜ ಖಛಿಚಿಟ" ವಿಷಯದ ಕುರಿತು ಜಾಗೃತಿ ಮೂಡಿಸಿದರು. ಮಕ್ಕಳ ಸಹಾಯವಾಣಿ 1098, ತುರ್ತು ಸೇವೆ 112 ಹಾಗೂ ಮಹಿಳಾ ಸಹಾಯವಾಣಿ 181 ಕುರಿತು ಮಾಹಿತಿ ನೀಡಿ, ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರು ಈ ಸೇವೆಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನೀರೀಕ್ಷಕ ಎಲ್.ಕೆ. ಜೂಲಕಟ್ಟಿ ಅವರು ಮಾನವ ಕಳ್ಳಸಾಗಣೆಯ ವಿವಿಧ ರೂಪಗಳು ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊನೆಯಲ್ಲಿ ರಮೇಶ್ ಕಳ್ಳಿಮನಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 