ವಿಶ್ವ ಪರಿಸರ ದಿನಾಚರಣೆ: ಬಳ್ಳಾರಿಯಲ್ಲಿ 5,000 ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಚಾಲನೆ
World Environment Day: DC Nagendra Prasad K launches 5,000 sapling planting program in Bellary
ಲೋಕದರ್ಶನ ವರದಿ
ಬಳ್ಳಾರಿ 05: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕೆಎಂಆರ್ಸಿ, ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ಶುಕ್ರವಾರ ಬೃಹತ್ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಚಾಲನೆ ನೀಡಿದರು.
ಗಿಡ ನೆಟ್ಟು ನೀರೂಣಿಸಿದ ಬಳಿಕ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ಬಳ್ಳಾರಿ ನಗರದಲ್ಲಿ ಒಟ್ಟು 5,000 ಸಸಿಗಳನ್ನು ನೆಡುವ ಮಹತ್ತರ ಉದ್ದೇಶವನ್ನು ಹೊಂದಲಾಗಿದ್ದು, ಅಧಿಕೃತವಾಗಿ ಚಾಲನೆ ನೀಡಲಾಗಿದೆ ಎಂದರು.
ಬಳ್ಳಾರಿಯ ಪ್ರತಿಯೊಬ್ಬ ನಾಗರಿಕರು ಕನಿಷ್ಠ ಒಂದು ಗಿಡವನ್ನು ನೆಟ್ಟು, ಅದನ್ನು ಪೋಷಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ನಾವು ನೀಡಬಹುದಾದ ಅತ್ಯಂತ ದೊಡ್ಡ ಕೊಡುಗೆ ಎಂದರೆ ಅದು ಪರಿಸರ ಸಂರಕ್ಷಣೆ ಮಾತ್ರ ಎಂದು ಕರೆ ನೀಡಿದರು.
ಇದೇ ವೇಳೆ ಗಣ್ಯರು ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ಗಿಡಗಳನ್ನು ನೆಟ್ಟು ನೀರೂಣಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಹಿರಿಯರಾದ ಎಸ್.ಆರ್. ಹೀರೆಮಠ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಇನ್ನೀತರರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 