ವಿಶ್ವ ಪರಿಸರ ದಿನಾಚರಣೆ ಪರಿಸರ ಸಂರಕ್ಷಣೆಯೇ ನಮ್ಮೆಲ್ಲರ ಹೊಣೆ
World Environment Day: Protecting the environment is everyone's responsibility
ಲೋಕದರ್ಶನ ವರದಿ
ಬ್ಯಾಡಗಿ 08: ಪಟ್ಟಣದ ಸರಕಾರಿ ಪ್ರಥಮ ದರ್ಜೆಯ ಪದವಿ ಕಾಲೇಜ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪರಿಸರ ಸಂರಕ್ಷಣೆಯೇ ನಮ್ಮೆಲ್ಲರ ಹೊಣೆ: ಮಲ್ಲಿಕಾರ್ಜುನ್ ಕಡ್ಡಿಪುಡಿ ಅಭಿಮತ ಸರ್ಕಾರಿ ಪದವಿ ಕಾಲೇಜಿನಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮತ್ತು ಜಾಗೃತಿ ಮೂಡಿಸಲು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಸಸಿ ನೆಡುವ ಮೂಲಕ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ಕಡ್ಡಿಪುಡಿ ಅವರು,ಪ್ರಕೃತಿಯೇ ನಮಗೆ ಜೀವನಾಡಿ. ಆಧುನಿಕ ಜೀವನ ಶೈಲಿಯಲ್ಲಿ ನಾವು ಪ್ರಕೃತಿಯಿಂದ ದೂರವಾಗುತ್ತಿದ್ದೇವೆ. ಪರಿಸರವನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ದಿನ ನಿತ್ಯದ ಜೀವನದಲ್ಲಿ ಮರ-ಗಿಡಗಳನ್ನು ಬೆಳೆಸುವ, ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸುವ, ಜಲ ಸಂರಕ್ಷಣೆಯ ಸಂಕಲ್ಪವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತೊಡಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಕಾಲೇಜು ಸಿಬ್ಬಂದಿಗಳಾದ ಡಾ. ದೇವೇಂದ್ರ ಬಿ ಎಸ್. ಎಸ್ ಜಿ ಸಣ್ಣಗೌಡ್ರ್. ಚಿಕ್ಕಣ್ಣ ಬಿಎಸ್ .ಡಾಕ್ಟರ್ ಮಂಜುನಾಥ್ ಕಮ್ಮಾರ್. ಶಿವಪ್ಪ ಗಿಡ್ಡಣ್ಣನವರ್. ಕಾಂತೇಶ್ ತಳವಾರ್ ಸೆರಿದಂತೆ ವಿದ್ಯಾರ್ಥಿಗಳು ಸಹ ಉಪಸ್ಥಿತರಿದ್ದರು
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 