ವಿಶ್ವಪರಿಸರ ದಿನ : ಬಸವ ಸಂಸ್ಕೃತಿ ಶಾಲೆಯಲ್ಲಿ ವನಮಹೋತ್ಸವ ಆಚರಣೆ
World Environment Day: Vanamahotsava celebration at Basava Sanskriti School
ಲೋಕದರ್ಶನ ವರದಿ
ಹುಬ್ಬಳ್ಳಿ 06 : ವಿಶ್ವಪರಿಸರ ದಿನ ಅಂಗವಾಗಿ ಗೋಕುಲ ರಸ್ತೆ, ಮುರಾರ್ಜಿನಗರ 2ನೇ ಹಂತ, ಬಸವ ಕೇಂದ್ರದ ವಿಎಂ ಕೊಟಗಿ ಬಸವ ಸಂಸ್ಕೃತಿ ಶಾಲೆಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ರಾಣಿಚನ್ನಮ್ಮ ಪರಿಸರ ಸೇವಾಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪರಿಸರ ಸಂರಕ್ಷಣೆಮಾಡಿ, ನಮ್ಮನಮ್ಮ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಂಡರೆ, ಈ ಭೂಮಿಯೇ ಸ್ವರ್ಗವಾಗುತ್ತದೆ. ಪರಿಸರ ಸಂರಕ್ಷಣೆಯ ಬಗ್ಗೆಜಾಗೃತಿ ಮೂಡಿಸುವುದು. ಪ್ರಕೃತಿಯನ್ನು ಸಂರಕ್ಷಿಸಲು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಬಸವಕೇಂದ್ರದ ವಿಎಂಕೊಟಗಿ ಬಸವಸಂಸ್ಕೃತಿ ಶಾಲೆಯ ಸಮಿತಿಯ ಕಾರ್ಯದರ್ಶಿಗಳು, ನಿವೃತ್ತ ಪ್ರಾಧ್ಯಾಪಕ ಡಾ. ಪ್ರಕಾಶ್ಮುನ್ನೊಳ್ಳಿ, ಶಾಲೆಯ ಪ್ರಾಚಾರ್ಯ ಜೆ. ಪಿ. ಕಲವಕುರಿ, ಶಿಕ್ಷಕಿಯರಾದ ಶಶಿಕಲಾವಾಲಿ, ಮಾಲಾರಮೇಶ್, ಮಧುಕಂಠಿ, ನೇಹಾಕಂಠಿ, ಶ್ರುತಿ ಇಬ್ರಾಹಿಂಪುರ , ಪ್ರೀತಿ ಪಾಡಾ, ಈಶ್ವರಿ ಬೆಸ್ತ, ಯಶೋಧ ಗಾಯಕ್‌ವಾಡ್, ಪ್ರಿಯಾಸಂಕನ ಗೌಡರ, ಆರತಿ ಜಮ್ಯಾಳ, ಶಾಲೆಯ ಮಕ್ಕಳು, ಪಾಲಕರು, ಮುಂತಾದವರು ಭಾಗವಹಿಸಿದ್ದರು. ಶಾಲೆಯ ಮಕ್ಕಳು ಮುರಾರ್ಜಿ ನಗರದ ಓಣಿಗಳಲ್ಲಿ ಪ್ರಭಾತ್ಪೇರಿ ಮಾಡುವ ಮೂಲಕ ಪರಿಸರ ಉಳಿಸಿ, ಪರಿಸರ ಬೆಳೆಸಿ, ನಮ್ಮಭೂಮಿ ನಮ್ಮ ಜವಾಬ್ದಾರಿ, ಮುಂತಾದ ಘೋಷಣೆಗಳನ್ನು ಕೂಗಿತ್ತಾ ಶುದ್ಧಗಾಳಿ, ಶುಧ್ಧನೀರು, ಸ್ವಚ್ಛತೆ, ಪರಿಸರ ಸಂರಕ್ಷಣೆ, ಸುಂದರ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜನರಲ್ಲಿ ಜಾಗೃತಿ ಮೂಡಿಸಿದರು. ಮಕ್ಕಳು , ಶಿಕ್ಷಕರು ಜನರ ಮೆಚ್ಚುಗೆಗೆ ಪಾತ್ರರಾದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 