ವಿಶ್ವ ಪರಿಸರ ದಿನ ಆಚರಣೆ
ತಾಳಿಕೋಟಿ 06: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ ಅವರು ಶಾಲಾ ಆವರಣದಲ್ಲಿ ಸಸಿಯನ್ನು ನಡೆಸಿ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಸಂತೋಷ ಪವಾರ, ಮುಖ್ಯಅತಿಥಿ ಸಂಗನಗೌಡ ಅಸ್ಕಿ. ಮತ್ತು ಸರ್ವ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.