ಕಬ್ಬೂರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at Kabbur Government Model Primary School
ಕಬ್ಬೂರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಹಾವೇರಿ 05: ಕಬ್ಬೂರ ಗ್ರಾಮದ ಪಿ.ಎಂ.ಶ್ರೀ ಕುವೆಂಪು ಶತಮಾನೋತ್ಸವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ರುಚಿ ಬಿಂದಲ್ ಅವರು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೂರ್ವ ಪ್ರಾಥಮಿಕ ತರಗತಿ ಹಾಗೂ ಶಾಲಾ ಕೈತೋಟ ಉದ್ಘಾಟನೆ ನೆರವೇರಿಸಿದ ಅವರು, ಶಾಲಾ ವಿದ್ಯಾರ್ಥಿಗಳ ಬಗ್ಗೆ ಹಾಗೂ ಶಾಲೆಯ ಸುಂದರ ಆವರಣ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷ ಕರಬಸಪ್ಪ ಹೊಸಳ್ಳಿ, ಎಸ್ ಡಿ ಎಮ್ ಸಿ ಅಧ್ಯಕ್ಷ ಶಿವಣ್ಣ ತೋಟದ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಎಚ್ ಪಾಟೀಲ್, ಕ್ಷೇತ್ರ ಸಮನ್ವಯ ಅಧಿಕಾರಿ ಮಹದೇವಪ್ಪ ಡಿ ಎಂ, ಅಕ್ಷರ ದಾಸೋಹದ ಅಧಿಕಾರಿ ಜಗದೀಶ ಹಂಡೆಗಾರ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಶಿಲ್ಪ ಉಜ್ಜಮ್ಮನವರ, ಮಾಜಿ ಅಧ್ಯಕ್ಷ ಬಸಣ್ಣ ದ್ಯಾವಣ್ಣವರ, ಉಪಾಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಣ ಪ್ರೇಮಿಗಳು ಗ್ರಾಮಸ್ಥರು, ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 