ನರೇಗಾ ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
World Environment Day celebrated at NREGA work site
ಕಾರವಾರ 05: ನರೇಗಾ ಯೋಜನೆಯು ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲದೇ ಜಲಮೂಲಗಳ ರಕ್ಷಣೆ ಮತ್ತು ಹಸಿರು ಕ್ರಾಂತಿಗೆ ಪೂರಕವಾಗಿದೆ. ಗ್ರಾಮೀಣ ಭಾಗದಲ್ಲಿ ಪರಿಸರ ಸಮತೋಲನ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬ ಕಾರ್ಮಿಕರೂ ತಮ್ಮ ಮನೆಯ ಸುತ್ತಮುತ್ತ ಹಾಗೂ ಕಾಮಗಾರಿ ನಡೆದ ಸ್ಥಳಗಳಲ್ಲಿ ಗಿಡಗಳನ್ನು ಬೆಳೆಸಬೇಕು ಎಂದು ಹವಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹಾಂತೇಶ ಹುರಕಡ್ಲಿ ಹೇಳಿದರು. ಅವರು ಶುಕ್ರವಾರ ಹಳಿಯಾಳ ತಾಲೂಕಿನ ಹವಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೌಡರ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನ ಆಚರಿಸಿ ಮಾತನಾಡಿದರು.
ಪ್ರತಿದಿನ ಕೇವಲ ಶ್ರಮದಾನಕ್ಕೆ ಸೀಮಿತವಾಗದೇ ನರೇಗಾ ಕೂಲಿ ಕಾರ್ಮಿಕರು, ಇಂದು ಪರಿಸರ ಉಳಿಸುವ ನಿಟ್ಟಿನಲ್ಲಿ ಸಸಿಗಳನ್ನು ನೆಟ್ಟು, ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದು ಮಹತ್ವದ ನಿರ್ಧಾರವಾಗಿದ್ದು, ಅವುಗಳನ್ನು ಮಕ್ಕಳಂತೆ ಪೋಷಿಸಬೇಕು ಎಂದರು. ನರೇಗಾ ಕಾಮಗಾರಿ ಸ್ಥಳದಲ್ಲಿ ಅಧಿಕಾರಿಗಳು ಹಾಗೂ ನರೇಗಾ ಕೂಲಿ ಕಾರ್ಮಿಕರು ಜಂಟಿಯಾಗಿ ಕಾಮಗಾರಿ ಸ್ಥಳದ ಸುತ್ತಮುತ್ತ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನರೇಗಾ ಐಇಸಿ ಸಂಯೋಜಕಿ ಸೌಂದರ್ಯ ಕುರಕುರಿ, ತಾಂತ್ರಿಕ ಸಹಾಯಕರಾದ ಸುಗಂಧ ಧಾಮನೇಕರ, ವಿನಯ ಕೊಳೂರ್, ಮಹೇಶ ಪಾಟೀಲ್, ಮನೀಶ್ ನಾಯ್ಕ್, ತಾಂತ್ರಿಕ ಸಹಾಯಕರಾದ(ಅರಣ್ಯ) ಅಬ್ದುಲ್ ಗಫರ್ ಸಾಬ್, ಗ್ರಾಮ ಪಂಚಾಯತಿ ಸಿಬ್ಬಂದಿ, ಕಾಯಕ ಬಂಧು ಹಾಗೂ ನರೇಗಾ ಕೂಲಿಕಾರ್ಮಿಕರು ಹಾಜರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 