ಬೆಳಗಾವಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಜಾಗತಿಕ ಪರಿಸರ ದಿನಾಚರಣೆ

ಬೆಳಗಾವಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಜಾಗತಿಕ ಪರಿಸರ ದಿನಾಚರಣೆ    World Environment Day celebrated at Rani Channamma University in Belgaum

ಲೋಕದರ್ಶನ ವರದಿ 

ಬೆಳಗಾವಿ 05: ವಿಶ್ವ ಪರಿಸರ ದಿನಾಚರಣೆಯ ಉದ್ಘಾಟನೆಯನ್ನು ನೇರವೇರಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಡಿ. ಎನ್‌. ಪಾಟೀಲ ರವರು ಪರಿಸರ ಸಂರಕ್ಷಣೆಯಲ್ಲಿ ಯುವಕರ ಪಾಲ್ಗೋಳ್ಳುವಿಕೆಯ ಮಹತ್ವವವನ್ನು ತಿಳಿಸಿದರು. ಇಂದಿನ ಜಾಗತಿಕ ತಾಪಮಾನ ಹೆಚ್ಚಾದ ಪರಿಸ್ಥಿತಿಯಲ್ಲಿ ಪರಿಸರ ಮಾಲಿನ್ಯದಿಂದ ನಮ್ಮ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ತಿಳಿಸಿದರು.  ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ಶ್ರೀ ಶಿವಾನಂದ ಮಾಳಿ ರವರು ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಿಸುವ ವಿಧಾನಗಳನ್ನು ಹಾಗೂ ಅರಣ್ಯ ಕುರಿತ ಸರ್ಕಾರದ ನೀತಿಗಳನ್ನು ವಿಶ್ವವಿದ್ಯಾಲಯದ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವರಿಸಿದರು. ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗದ ನಿರ್ದೇಶಕರಾದ ಪ್ರೊ. ವಾಯ್‌. ಎಸ್‌. ಬಲವಂತಗೋಳ ರವರು ಸ್ವಾಗತಿಸಿದರು. ರಾಚವಿ ಎನ್‌. ಎಸ್‌. ಎಸ್‌. ಸಂಯೋಜಕರಾದ ಡಾ. ಕನಕಪ್ಪ ಪೂಜಾರ ರವರು ವಂದಿಸಿದರು. ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳ ಮುಖ್ಯಸ್ಥರುಗಳು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.