ಶ್ರೀಮಂಜುನಾಥೇಶ್ವರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at Srimanjunatheshwara School
ಧಾರವಾಡ 05: ಜೆ.ಎಸ್.ಎಸ್ ಶ್ರೀಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಶಾಲಾ ಪ್ರಾಚಾರ್ಯೆ ಸಾಧನಾಎಸ್ ಇವರು ಪರಿಸರ ರಾ್ಯಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ಮಾಡಿ, ಪರಿಸರದ ಉಳಿವಿನಿಂದ ಮಾತ್ರ ನಮ್ಮ ಉಳಿವು ಸಾಧ್ಯ. ಪರಿಸರದ ರಕ್ಷಣೆಗೆ ನಾವೆಲ್ಲರೂ ಕೈಜೋಡಿಸಬೇಕಿದೆ. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು ಆದ್ದರಿಂದ ಪರಿಸರವನ್ನು ರಕ್ಷಿಸಿ, ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ, ಮೋಟಾರು ವಾಹನಗಳ ಬಳಕೆಯನ್ನು ಕಡಿಮೆ ಮಾಡಿಎಂದು ಮಕ್ಕಳಿಗೆ ತಿಳಿಹೇಳಿದರು.
1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಲವು ಮಕ್ಕಳು ವನ್ಯಪ್ರಾಣಿಗಳ ವೇಷ ಧರಿಸಿದರೆ, ಇನ್ನೂ ಹಲವರು ತಾವೇ ತಯಾರಿಸಿದ ಪರಿಸರಕ್ಕೆ ಸಂಬಂಧಿಸಿದ ಘೋಷಣಾ ಫಲಕಗಳನ್ನು ಹಿಡಿದು ಪಥಸಂಚಲನದಲ್ಲಿ ಪಾಲ್ಗೊಂಡರು.
ಮಕ್ಕಳು ಶಾಲಾ ಆವರಣವನ್ನು ಸ್ವಚ್ಚಗೊಳಿಸಿದರು. ಪರಿಸರ ಕಾಳಜಿಯ ಬಗ್ಗೆ ಮಕ್ಕಳು ನೃತ್ಯ ಹಾಗೂ ನಾಟಕ ಪ್ರದರ್ಶನವನ್ನು ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 