ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ : ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ : ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ World Environment Day celebrated at the District Collector's office premises: District Collector cal

          ವಿಜಯಪುರ  05:  ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ  ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ. ಅವರು ಅಧಿಕಾರಿಗಳು ಹಾಗೂ  ಸಿಬ್ಬಂದಿಯೊಂದಿಗೆ ಶುಕ್ರವಾರ ಬೆಳಿಗ್ಗೆ ಆವರಣ ಸ್ವಚ್ಛತಾ ಹಾಗೂ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು. 

ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸಸಿ ನೆಟ್ಟು, ನೀರುಣಿಸುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಪ್ರತಿಪಾದಿಸಿದ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದ್ದು, ಹಸಿರು ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. 

ಹಸಿರೇ ಉಸಿರಾಗಿದೆ. ಹಸಿರನ್ನು ಉಳಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಬಹುದೊಡ್ಡ ಕೊಡುಗೆ ನೀಡೋಣ. ಮರಗಳನ್ನು ಬೆಳೆಸುವ ಮೂಲಕ ಪರಿಸರದ ಸಮತೋಲನ ಕಾಪಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. 

ಹಸಿರು ವಾತಾವರಣ ನಿರ್ಮಾಣ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಗಿಡ ನೆಡುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಿದ ಅವರು, ವಿಶ್ವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮಗಳ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿ, ಹಸಿರು ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವ ಸಂಕಲ್ಪ ಕೈಗೊಳ್ಳಬೇಕು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯವೂ ನಡೆಸಲಾಯಿತು. ಪರಿಸರ ಸ್ವಚ್ಛತೆ ಮತ್ತು ಹಸಿರು ವಾತಾವರಣ ನಿರ್ಮಾಣ ಎರಡೂ ಪರಸ್ಪರ ಪೂರಕವಾಗಿದ್ದು, ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಓದ್ರಾಮ, ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿ, ಸಿಬ್ಬಂದಿ, ಆಹಾರ ಇಲಾಖೆಯ, ಜಿಲ್ಲಾ ಖಜಾನೆ ಇಲಾಖೆ, ನಗರಾಭಿವೃದ್ಧಿ ಕೋಶ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.