ಜಾಫರವಾಡಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಶಾಲಾ ಆರೋಗ್ಯ ಕಾರ್ಯಕ್ರಮ ಯಶಸ್ವಿ
World Environment Day celebration and school health program a success in Jafarwadi village
ಲೋಕದರ್ಶನ ವರದಿ
ಬೆಳಗಾವಿ, ಜೂನ್ 06: ಬೆಳಗಾವಿಯ ಬಿಮ್ಸ್ ಅಧೀನದ ಸರ್ಕಾರಿ ನಸಿಂರ್ಗ್ ಶಾಲೆಯ 3ನೇ ವರ್ಷದ ಜಿ.ಎನ್.ಎಂ. ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಸಮುದಾಯ ಆರೋಗ್ಯ ನಸಿಂರ್ಗ್ ಕ್ಷೇತ್ರಾನುಭವ ಕಾರ್ಯಕ್ರಮದ ಅಂಗವಾಗಿ ಜಾಫರವಾಡಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಶಾಲಾ ಆರೋಗ್ಯ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆ ಜಾಫರವಾಡಿಯಲ್ಲಿ ಶಾಲಾ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವೈದ್ಯಕೀಯ ತಂಡದಿಂದ ಶಾಲಾ ಮಕ್ಕಳಿಗೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು. ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯನ್ನು ಪರೀಶೀಲಿಸಿ ಆರೋಗ್ಯ ಸಂಬಂಧಿತ ಮಾರ್ಗದರ್ಶನ ನೀಡಲಾಯಿತು.
ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು. ಅಲ್ಲದೇ ನಸಿಂರ್ಗ್ ವಿದ್ಯಾರ್ಥಿನಿಯರು ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ನಾಟಕ ಪ್ರದರ್ಶಿಸಿ, ಶಾಲಾ ಮಕ್ಕಳಿಗೆ ಪರಿಸರದ ಮಹತ್ವ, ಸ್ವಚ್ಛತೆ ಮತ್ತು ಆರೋಗ್ಯಕರ ಜೀವನ ಶೈಲಿಯ ಕುರಿತು ಆರೋಗ್ಯ ಶಿಕ್ಷಣ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸರ್ಕಾರಿ ನಸಿಂರ್ಗ್ ಶಾಲೆ, ಬಿಮ್ಸ್, ಬೆಳಗಾವಿಯ ಪ್ರಾಂಶುಪಾಲರಾದ ಡಾ. ಪ್ರಕಾಶ ಕೊಡ್ಲಿ ಅವರು ವಿಶ್ವ ಪರಿಸರ ದಿನದ ಮಹತ್ವ, ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಪಾತ್ರ ಹಾಗೂ ಶಾಲಾ ಆರೋಗ್ಯ ಕಾರ್ಯಕ್ರಮಗಳ ಅಗತ್ಯತೆ ಕುರಿತು ಮಾತನಾಡಿದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಹಾಗೂ ಪರಿಸರದ ಬಗ್ಗೆ ಕಾಳಜಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆ ಜಾಫರವಾಡಿಯ ಮುಖ್ಯೋಪಾಧ್ಯಾಯರಾದ ಪಿ.ಬಿ. ಹಾಲೆನ್ನವರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸರ್ಕಾರಿ ನಸಿಂರ್ಗ್ ಶಾಲೆ, ಬಿಮ್ಸ್, ಬೆಳಗಾವಿಯ ಉಪನ್ಯಾಸಕರು, ವಿದ್ಯಾರ್ಥಿನಿಯರು ಹಾಗೂ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆ, ಜಾಫರವಾಡಿಯ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 