ಮಾರಡಗಿಯ ಎಸ್‌.ಜಿ.ಜಿ.ಬಿಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಮಾರಡಗಿಯ ಎಸ್‌.ಜಿ.ಜಿ.ಬಿಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ  : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ World Environment Day celebration program held at S.G.G.B.M. Government High School, Maradagi

ಲೋಕದರ್ಶನ ವರದಿ 

ಧಾರವಾಡ ಜೂ.6: ಮಾರಡಗಿಯ ಎಸ್‌.ಜಿ.ಜಿ.ಬಿಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಮಾಜಿಕ ಅರಣ್ಯ ವಿಭಾಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಧಾರವಾಡ ಗ್ರಾಮೀಣ ಇವುಗಳ ಸಹಯೋಗದಲ್ಲಿ “ಇಂದು ಒಂದು ಗಿಡ ನಾಳೆ ಒಂದು ಕಾಡು” ಎಂಬ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ ಅವರು ಮಾತನಾಡಿ, ಶಾಲೆಯ ಮೈದಾನದಲ್ಲಿ ಸಸಿಯನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಪ್ರಾರಂಭಿಸಿ, ಪರಿಸರದ ಮಹತ್ವ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ನವೀಕರಿಸಬಹುದಾದ ಮತ್ತು ನವೀಕರಿಸಲಾಗದ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡಬೇಕೆಂದು ಕರೆ ನೀಡಿದರು. 

ಕಾರ್ಯಕ್ರಮದ ಮುಖ್ಯ ಅತಿಥಿ ಧಾರವಾಡ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅವರು ಮಾತನಾಡಿ, ಶಾಲಾ ಮೈದಾನದಲ್ಲಿ ನೆಟ್ಟಿರುವ ಗಿಡಗಳನ್ನು ಮಕ್ಕಳು ರಕ್ಷಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಇದೇ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಕ್ಕಳೊಂದಿಗೆ ಸಹ ಭೋಜನದೊಂದಿಗೆ ಮಧ್ಯಾಹ್ನದ ಬಿಸಿ ಊಟವನ್ನು ಸವಿದರು. 

ಕಾರ್ಯಕ್ರಮದಲ್ಲಿ ತಿಂಗಳ ಹಕ್ಕಿ ಲೋಕ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪಕ್ಷಿಗಳ ಬಗ್ಗೆ ಉಪನ್ಯಾಸ ನೀಡಲಾಯಿತು. ಚಿತ್ರಕಲಾ ಸ್ಪರ್ಧೆ ಏರಿ​‍್ಡಸುವುದರ ಮೂಲಕ ಮಕ್ಕಳಿಗೆ ಬಹುಮಾನವನ್ನು ನೀಡಲಾಯಿತು.  

ಮಾರಡಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ ಶಾನವಾಡ, ಧಾರವಾಡ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಶಿವಕುಮಾರ, ವಲಯ ಅರಣ್ಯ ಅಧಿಕಾರಿ ಸ್ನೇಹಾ ಎಸ್‌. ಕಂಬಳಿ ಹಾಗೂ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಎಸ್‌ಡಿಎಮ್‌ಸಿ ಅಧ್ಯಕ್ಷ ಫಕೀರ​‍್ಪ ಕಾಲವಾಡ, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಚಂದ್ರಶೇಖರ ಮಟ್ಟಿ, ಹನುಮಂತಪ್ಪ ಮಾರಡಗಿ ಹಾಗೂ ಸದಸ್ಯರು, ಭೂದಾನಿ ಶಿವರಾಜ್ ಬಳ್ಳಾರಿ, ಪಿಡಿಓ ಅಜಿತ್ ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ ಹಿರೇಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಅರ್ಕಸಾಲಿ ಅವರು ವಂದಿಸಿದರು.