ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ World Environment Day program held at the District Legal Services Authority office

ಲೋಕದರ್ಶನ ವರದಿ 

ಧಾರವಾಡ   05: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಂದು (ಜೂ.05) ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯ ಆವರಣದಲ್ಲಿ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಹಾಗೂ ಧಾರವಾಡ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.  

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು (ಪ್ರಭಾರ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ರಾಜಕುಮಾರ ಸಿ. ಅವರು ಸಸಿಯನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.  

ಪರಿಸರ ರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮರಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಪರಿಸರದಿಂದ ಮಾನವ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದು, ಪರಿಸರ ರಕ್ಷಣೆಯಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಭಾಗವಹಿಸಿ ಮರ-ಗಿಡಗಳನ್ನು ಬೆಳೆಸುವಂತೆ ಕರೆ ನೀಡಿದರು.  

ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುವರ್ಣ ಕೆ ಮಿರ್ಜಿ, ನಾಗರಾಜಪ್ಪ ಎ.ಕೆ, ಜರೀನಾ, ಪೂರ್ಣಿಮಾ ಭಂಡಾರಕರ (ಪೂರ್ಣಿಮಾ ಎನ್ ಪೈ) ವಕೀಲರ ಸಂಘದ ಅಧ್ಯಕ್ಷ ಸಿ.ಎಸ್‌.ನೇಗಿನಹಾಳ ಮತ್ತು ಪದಾಧಿಕಾರಿಗಳು, ನಗರದ ಎಲ್ಲ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿವಿಲ್ ನ್ಯಾಯಾಧೀಶರು, ಅರಣ್ಯ ಇಲಾಖೆಯ ಅಧಿಕಾರಿ ಕಿರಣಕುಮಾರ ಕರತಂಗಿ ಹಾಗೂ ಅರಣ್ಯ ಇಲಾಖೆಯ ಇತರ ಅಧಿಕಾರಿಗಳು, ವಕೀಲರು ಹಾಗೂ ಕಾನೂನು ಅಭಿರಕ್ಷಕರ ಕಛೇರಿಯ ನ್ಯಾಯಾವಾದಿಗಳು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.