ಬಳ್ಳಾರಿಯಲ್ಲಿ ವಿಶ್ವ ಜಾನಪದ ದಿನಾಚರಣೆ: ಯುವಜನರಲ್ಲಿ ಜಾನಪದ ಕಲೆಗಳತ್ತ ಆಸಕ್ತಿ ಹೆಚ್ಚುತ್ತಿದೆ
World Folklore Day Celebration in Ballari: Growing Interest Among Youth in Folk Arts
ಬಳ್ಳಾರಿ, ಸೆ. 3: ಆಧುನಿಕತೆ ಮತ್ತು ಮೊಬೈಲ್ ಹಾವಳಿಯ ನಡುವೆಯೂ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ನಾಡಿನ ಜಾನಪದ ಕಲೆಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೋಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸತೀಶ್ ಎ. ಹಿರೇಮಠ ಹರ್ಷ ವ್ಯಕ್ತಪಡಿಸಿದರು.
ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ, ಹಳೆ ದರೋಜಿ ನಾಡೋಜ ಬುರ್ರಕಥಾ ಈರಮ್ಮ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಜಾನಪದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಕಾಲೇಜುಗಳಲ್ಲಿ ಜಾನಪದ ಜಾತ್ರೆ, ಹಬ್ಬ ಹಾಗೂ ಯುವಜನೋತ್ಸವಗಳಂತಹ ಕಾರ್ಯಕ್ರಮಗಳು ಜನಪ್ರಿಯವಾಗುತ್ತಿರುವುದು ನಮ್ಮ ಸಂಸ್ಕೃತಿಯ ಉಳಿವಿಗೆ ಸಹಕಾರಿಯಾಗಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 