ವಿಶ್ವ ಮಲೇರಿಯಾ ದಿನ
World Malaria Day
ಲೋಕದರ್ಶನ ವರದಿ
ಹಾವೇರಿ 28 : ಕರ್ನಾಟಕ ರಾಜ್ಯದಲ್ಲಿ 2027 ರ ವೇಳೆಗೆ ಮಲೇರಿಯ ನಿವಾರಣಾ ಗುರಿ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಕೀಟ ಶಾಸ್ತ್ರಜ್ಞ ಶ್ರೀಕಾಂತ ಪಾಟೀಲ ಹೇಳಿದರು. ಹಾವೇರಿ ನಗರದ ದೇವಧರ ಆಸ್ಪತ್ರೆಯಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಲೇರಿಯಾ ಎಂದರೇನು ? ಮಲೇರಿಯಾ ಲಕ್ಷಣಗಳು , ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ ಪಾಟೀಲ ಉದ್ಘಾಟನೆ ನೆರವೇರಿಸಿದರು. ದೇವಧರ ಸೆಂಟರ್‌ನ ಪ್ರಾಂಶುಪಾಲ ಸಿ.ಬಿ ಗುಡ್ಡೇರ ಅಧ್ಯಕ್ಷತೆ ವಹಿಸಿದ್ದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಎಸ್.ಕುಂದೂರ. ಡಾ. ಪ್ರೇಮಾ ಪೂಜಾರ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಚಂದ್ರು ಹಿತ್ತಲಮನಿ, ಹಿರೇಮಠ ಸರ್, ಉಮಾ, ಎ ಪಿ ಪಾಟೀಲ್, ಕೃಷ್ಣಪ್ಪ ಇತರರು ಉಪಸ್ಥಿತರಿದ್ದರು. ಸಂಗೀತಾ ದೊಡ್ಡಮನಿ ವಂದಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 