ವಿಶ್ವ ಹಾಲು ದಿನಾಚರಣೆ

  ವಿಶ್ವ ಹಾಲು ದಿನಾಚರಣೆ World Milk Day

ಲೋಕದರ್ಶನ ವರದಿ 

ಹಾವೇರಿ  01:   ವಿಶ್ವ ಹಾಲು ದಿನಾಚರಣೆಯ ಅಂಗವಾಗಿ  ಸೋಮವಾರ ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ, ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ನಂದಿನಿ ಸುವಾಸಿತ ಹಾಲನ್ನು ವಿತರಿಸುವ ಮೂಲಕ ಅಂತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಮ್ ಎಮ್ ಹಿರೇಮಠ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಫ್‌.ಎನ್‌.ಗಾಜಿಗೌಡ, ಹಾವೇರಿ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಮ್‌.ಎಮ್‌.ಮೈದೂರ, ಸಂಜೀವಕುಮಾರ್ ನೀರಲಗಿ, ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕೊಟ್ರೇಶಪ್ಪ ಬಸೇಗಣ್ಣಿ, ಮಳ್ಳಪ್ಪ ನಿಂಗಜ್ಜನವರ, ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಹ ಪಾಟೀಲ್, ಹಾವೇರಿ ತಾಲೂಕಿನ ನಿರ್ದೇಶಕ ಬಸವೇಶಗೌಡ ಪಾಟೀಲ್, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಎಸ್ ಎಮ್  ಇತರರು ಉಪಸ್ಥಿತರಿದ್ದರು.