ವಿಶ್ವ ತಾಯಂದಿರ ದಿನಾಚರಣೆ: ಮಕ್ಕಳಲ್ಲಿ ಮೌಲ್ಯ ಶಿಕ್ಷಣಕ್ಕೆ ಕರೆ
ವಿಜಯಪುರ 30 : ಜಲನಗರದಲ್ಲಿರುವ ಬಿ.ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯ ವಿಕ್ರಂ ಅವರು ಮಾತನಾಡಿ, ತಾಯಿಯ ತ್ಯಾಗ, ಪ್ರೀತಿ ಮತ್ತು ಶ್ರಮವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಅವರು ಮಕ್ಕಳಿಗೆ ಮೌಲ್ಯ ಶಿಕ್ಷಣ, ಉತ್ತಮ ನಡೆ-ನುಡಿ ಮತ್ತು ಸಂಸ್ಕೃತಿಯನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಇಂತಹ ಕಾರ್ಯಕ್ರಮಗಳು ಮಕ್ಕಳ ಮನೋವಿಕಾಸಕ್ಕೆ ಸಹಕಾರಿ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಂಯೋಜಕಿ ಜಯಾ ಗಲಗಲಿ, ಶಿಕ್ಷಕರು, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.