ವಿಶ್ವ ತಂಬಾಕು ರಹಿತ ದಿನಾಚರಣೆ

ವಿಶ್ವ ತಂಬಾಕು ರಹಿತ ದಿನಾಚರಣೆ World No Tobacco Day

ಬೆಳಗಾವಿ, ಜೂನ್ 02: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಶಿಂದೋಳ್ಳಿ ಹಾಗೂ ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇವರ ಸಂಯಕ್ತ ಆಶ್ರಯದಲ್ಲಿ ಜೂನ್ 2 2026 ರಂದು ಬೆಳಗಾವಿ ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಶಿಂದೊಳ್ಳಿಯಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಭರತೇಶ ಎಜುಕೇಶನ್ ಟ್ರಸ್ಟ ಅಧ್ಯಕ್ಷರಾದ ಡಾ. ಸಾವಿತ್ರಿ ದೊಡ್ಡನ್ನವರ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಮಹತ್ವವನ್ನು ತಿಳಿಸುತ್ತಾ ದುಷ್ಟಟಗಳಿಂದ ದೂರವಿರಲು ಹೇಳಿದರು. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಜಂಟಿಯಾಗಿ ಆಯೋಜಿಸಲು ತಮ್ಮ ಸಂಸ್ಥೆ ವತಿಯಿಂದ ಸಹಕಾರ ನೀಡುವುದಾಗಿ ತಿಳಿಸಿದರು.  

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಂಜಯ ಎಸ್ ದೊಡ್ಡಮನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲವಾರು ರೀತಿಯ ದುಷ್ಪರಿಣಾಮ ಬಿರುತ್ತವೆ. ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ ಹೀಗಾಗಿ ಸಾರ್ವಜನಿಕರು ತಂಬಾಕು ಸೇವನೆ ತ್ಯೆಜಿಸಬೇಕು ಎಂದು ಕರೆ ನೀಡಿ, ಈ ವರ್ಷದ ಘೋಷವಾಕ್ಯ “ಆಕರ್ಷಣೆಯನ್ನು ಬಹಿರಂಗಪಡಿಸುವುದು-ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು  ಎದುರಿಸುವುದು ” ಎಂಬುವುದರ ಕುರಿತು  ಮಾತನಾಡಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ನಿರ್ದೇಶಕರಾದ ಡಾ. ಅರುಣಕುಮಾರ ಜಮದಾಡೆ ಅವರು ಮಾತನಾಡಿ, ಹೊಗೆ ರಹಿತ ತಂಬಾಕು ಸೇವನೆಯಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮದ ಕುರಿತು ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು  ಉತ್ಪನ್ನಗಳನ್ನು ಜಗಿಯುವುದು ಮತ್ತು ಉಗುಳುವುದು ಕಂಡು ಬಂದಲ್ಲಿ ದಂಡವನ್ನು ವಿಧಿಸಿ ಕಾನೂನಿನ ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕತೆವಿದೆ ಎಂದರು.  

ಕಾರ್ಯಕ್ರಮದಲ್ಲಿ ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ನಿರ್ದೇಶಕರಾದ ಡಾ. ಶ್ರೀಕಾಂತ ಕೊಂಕನಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಪ್ರಸಾದ ಹಿರೇಮಠ, ಆರೋಗ್ಯ ನೀರೀಕ್ಷಣಾಧಿಕಾರಿಗಳು ಸಂಗಮನಾಥ ಬಾಳಿಗಟ್ಟಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರಕಾಶ ಮಾನೆ, ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಶ್ವೇತಾ ಪಾಟೀಲ, ಕವಿತಾ ರಾಜನ್ನವರ  ಕಾರ್ಯಕ್ರಮದಲ್ಲಿ ಉಸ್ಥಿತರಿದ್ದರು. ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ವಿಶ್ವ ತಂಬಾಕು ರಹಿತ ದಿನಚರಣೆಯ ಅಂಗವಾಗಿ ಬೀದಿ ನಾಟಕ, ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ಪ್ರಕಾಶ ಮಾನೆ ನಿರೂಪಿಸಿದರು ಹಾಗೂ ಡಾ. ಶ್ವೇತಾ ಪಾಟೀಲ ವಂದಿಸಿದರು.