ವಿಶ್ವ ತಂಬಾಕು ರಹಿತ ದಿನ ಆಚರಣೆ
World No Tobacco Day celebration
ಕಾರವಾರ 20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕು.ಕ. ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸೇಂಟ್ ಜೊಸೇಫ್ ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ಗುರುವಾರ ಆಯೋಜಿಸಲಾದ ‘ವಿಶ್ವ ತಂಬಾಕು ರಹಿತ ದಿನವನ್ನು’ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್ ಉದ್ಘಾಟಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮಾಧಿಕಾರಿ ಡಾ. ಅರ್ಚನಾ ನಾಯಕ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ಧ್ಯೇಯ ವಾಕ್ಯ “ಆಕರ್ಷಕ ಉತ್ಪನ್ನಗಳು-ಕರಾಳ ಉದ್ದೇಶಗಳು, ತಂಬಾಕು ಮತ್ತು ನಿಕೋಟಿನ್ ಉದ್ಯಮಗಳ ಮುಖವಾಡ ಬಿಚ್ಚಿಡುವುದರ” ಕುರಿತು ಪ್ರಾಸ್ತವಿಕವಾಗಿ ಮಾತನಾಡಿದರು.ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರೇಮಕುಮಾರ ನಾಯ್ಕ ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರವಾರದ ಸೇಂಟ್ ಜೊಸೇಫ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಫಾದರ್ ಸ್ಟ್ಯಾನಿ ಪಿಂಟೋ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸುಧೀತಾ ಪೆಡ್ನೇಕರ ಮತ್ತು ಸಮಾಜ ಕಾರ್ಯಕರ್ತ ಗೋರೇಸಾಬ ನದಾಫ ರವರು ಉಪಸ್ಥಿತರಿದ್ದರು. ವೃಂದಾ ತಾಮ್ಸೆ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 