ಜೆ. ಎಸ್‌. ಎಸ್ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವರೆಡ್ ಕ್ರಾಸ್ ದಿನಾಚಾರಣೆ

ಜೆ. ಎಸ್‌. ಎಸ್ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವರೆಡ್ ಕ್ರಾಸ್ ದಿನಾಚಾರಣೆ World Red Cross Day celebrated at J. S. S. Graduate College

ಲೋಕದರ್ಶನ ವರದಿ 

ಗೋಕಾಕ: ನಗರದ ಪ್ರತಿಷ್ಠಿತ ಗೋಕಾಕ ಶಿಕ್ಷಣ ಸಂಸ್ಥೆಯ ಜೆ. ಎಸ್‌. ಎಸ್ ಪದವಿ ಮಹಾವಿದ್ಯಾಲಯದಲ್ಲಿ ಯುವ ರೆಡ್ ಕ್ರಾಸ್ ಘಟಕಗಳ ವತಿಯಿಂದ ವಿಶ್ವ ರೆಡ್‌ಕ್ರಾಸ್ ದಿನಾಚರಣೆಯನ್ನು ಆಚರಿಸಲಾಯಿತು. ಉಡುಪಿಯ ಪೂರ್ಣಪ್ರಜ್ಞ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ    ಡಾ. ರಂಗಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಮಾನವೀಯತೆಯಲ್ಲಿ ಏಕತೆ ಎಂಬ ತತ್ವದಡಿಯಲ್ಲಿ ವಿಶ್ವರೆಡ್‌ಕ್ರಾಸ್ ದಿನಾಚಾರಣೆಯನ್ನು ಆಚರಿಸುತ್ತಿದ್ದು, ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರು ಬೆಳಸಿಕೊಳ್ಳುವಂತೆ ಕರೆ ನೀಡಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಚಿಕ್ಕಬಳ್ಳಾಪುರದ ಡಾ. ಉಮೇಶ. ಬಿ  ಸಹಾಯಕ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ಮಾತನಾಡಿ ಆರೋಗ್ಯದ ಜಾಗೃತಿ ರೆಡ್‌ಕ್ರಾಸ್‌ನ ಪ್ರಮುಖ ಉದ್ದೇಶವಾಗಿದ್ದು, ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸ್ವಯಂ ಸೇವಕರ ಪಾತ್ರ ಅಪಾರವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಿ. ಎಮ್‌. ತುರಡಗಿರವರು ಮಾತನಾಡಿ ರೆಡ್‌ಕ್ರಾಸ್ ಘಟಕದ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಆರೋಗ್ಯ ಜಾಗೃತಿಯನ್ನು ಮೂಡಿಸಿ ಅವರಿಂದ ಸಮಾಜದ ಜಾಗೃತಿಗೆ ಪ್ರೇರಣೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ್ರಾಚಾರ್ಯರಾದ ಡಾ. ಆರ್‌. ಎಸ್‌. ಬಳಿಗಾರ, ಋಂಅ ಸಂಯೋಜಕರಾದ ಡಾ. ಎನ್‌. ಎಲ್‌. ತೇರದಾಳ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪಿ.ಪಿ ಕಟ್ಟಿಮನಿ, ಯುವ ರೆಡ್‌ಕ್ರಾಸ್ ಘಟಕಗಳ ಕಾರ್ಯಕ್ರಮಾಧಿಕಾರಿಗಳಾದ ಡಾ. ಕೃಷ್ಣಮೂರ್ತಿ ಎಂ. ಎಸ್ ಮತ್ತು ಜೆ. ಜಿ. ಪೋಲಾಶಿ, ಬೋಧಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ವಿಗೊಳಿಸಿದರು. ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಕೃಷ್ಣಮೂರ್ತಿ ಎಂ. ಎಸ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.