ಸೆ.21ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ
World Senior Citizens' Day on September 21
ಲೋಕದರ್ಶನ ವರದಿ
ಹಿರಿಯ ನಾಗರಿಕರಿಗಾಗಿ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳು
ಗದಗ, ಸೆ. 11: ಸರ್ಕಾರದ ಮಾರ್ಗಸೂಚಿಯನ್ವಯ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 1ರಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಶ್ರೀಮತಿ ಶ್ರೀದೇವಿ ಎಸ್.ಎನ್. ತಿಳಿಸಿದ್ದಾರೆ.
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ 21ರಂದು ನಗರದ ಕೆ.ಎಚ್. ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ.21ರಂದು ಕೆ.ಎಚ್. ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳೆಯರು ಹಾಗೂ ಪುರುಷ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದರು.
ವಿವಿಧ ಕ್ರೀಡಾ ಸ್ಪರ್ಧೆಗಳು
60ಹಿ69, 70ಹಿ79 ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರತ್ಯೇಕ ವಿಭಾಗಗಳನ್ನು ರಚಿಸಲಾಗಿದ್ದು, ಕ್ರೀಡಾ ಸ್ಪರ್ಧೆಗಳಲ್ಲಿ ಬಿರುಸಿನ ನಡಿಗೆ, ಬಕೆಟ್ಗೆ ಚೆಂಡು ಎಸೆಯುವುದು, ಮ್ಯೂಸಿಕಲ್ ಚೇರ್, ಚೆಸ್ ಹಾಗೂ ಕ್ಯಾರಂ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.
ಅದೇ ರೀತಿ 60ಹಿ69, 70ಹಿ79 ಹಾಗೂ 80 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಏಕಪಾತ್ರಾಭಿನಯ ಹಾಗೂ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.
ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿದ ಹಿರಿಯ ನಾಗರಿಕರು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದವರು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವಂತಿಲ್ಲ. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಶ್ರೀಮತಿ ಶ್ರೀದೇವಿ ಎಸ್.ಎನ್. ತಿಳಿಸಿದರು.
ಪೂರ್ವಸಿದ್ಧತೆ ಕುರಿತು ಚರ್ಚೆ
ಸಭೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ ವ್ಯವಸ್ಥೆ, ಉಪಹಾರ, ಪುಸ್ತಕ, ಆಸನ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಶಾಲಾ ಶಿಕ್ಷಣ ಇಲಾಖೆಯ ಡಿವೈಸಿ ಮುತ್ಥಪ್ಪ ಕಂಬಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಾಗರ ಚವಾಣ್ ಸೇರಿದಂತೆ ಹಿರಿಯ ನಾಗರಿಕರ ಸಂಘದ ತಾಲೂಕು ಘಟಕದ ಅಧ್ಯಕ್ಷರು, ಹಿರಿಯ ನಾಗರಿಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 