ಆಗಸ್ಟ್ 11ರಂದು ಗ್ರಾಮ ಪಂಚಾಯಿತಿ ನೌಕರರಿಂದ ಯಾದಗಿರಿ ಚಲೋ
Yadgir Chalo by Gram Panchayat employees on August 11
ಲಕ್ಷ್ಮೇಶ್ವರ, ಆ.9: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ, ಗದಗ ಜಿಲ್ಲೆ ಹಾಗೂ ಲಕ್ಷ್ಮೇಶ್ವರ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಆಗಸ್ಟ್ 11ರಂದು ‘ಯಾದಗಿರಿ ಚಲೋ’ ಹೋರಾಟ ಹಮ್ಮಿಕೊಳ್ಳಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ನಡೆದಿರುವ ಘಟನೆಗಳು ಬೇರೆ ಯಾವುದೇ ಜಿಲ್ಲೆಯಲ್ಲಿಯೂ ಮರುಕಳಿಸಬಾರದು ಎಂಬ ಉದ್ದೇಶದಿಂದ ಈ ಹೋರಾಟ ನಡೆಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಅರ್ಕಸಾಲಿ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ಸಿಬ್ಬಂದಿ ತಮ್ಮ ಹಕ್ಕುಗಳನ್ನು ಕೇಳಲು ಮುಂದಾದ ಸಂದರ್ಭದಲ್ಲಿ ವೇತನ ಕಡಿತ ಮಾಡುವ ಆದೇಶ ಹೊರಡಿಸಿರುವುದು ಖಂಡನೀಯ. ಇಂತಹ ಘಟನೆಗಳು ಬೇರೆ ಜಿಲ್ಲೆಗಳಲ್ಲಿ ನಡೆಯಬಾರದು. ಗ್ರಾಮ ಪಂಚಾಯಿತಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ಗ್ರಾಮ ಪಂಚಾಯಿತಿ ವ್ಯವಸ್ಥೆಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರರು, ಕ್ಲರ್ಕ-ಕಂ-ಡೇಟಾ ಎಂಟ್ರಿ ಆಪರೇಟರ್ಗಳು, ವಾಟವರ್ಾ್ಯುನ್, ಜವಾನರು, ಸ್ವೀಪರ್ಗಳು ಹಾಗೂ ಸ್ವಚ್ಛತಾ ವಾಹನಗಳ ನೌಕರರು ಸೇರಿದಂತೆ ಎಲ್ಲ ಸಿಬ್ಬಂದಿಯೂ ‘ಯಾದಗಿರಿ ಚಲೋ’ ಹೋರಾಟದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಬಸವರಾಜ ಅರ್ಕಸಾಲಿ ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ನೌಕರರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 