ಭಾರತ ಹುಣ್ಣಿಮೆ ಜಾತ್ರೆಗೆ ಯಲ್ಲಮ್ಮನಗುಡ್ಡ ಸಜ್ಜು ಶುಕ್ರವಾರದಿಂದಲೇ ಅಮ್ಮನ ಸನ್ನಿಧಿಯತ್ತ ಭಕ್ತರ ದಂಡು ಹರಿದುಬರುತ್ತಿದ್ದು, ತುಂಬಿ ತುಳುಕುತ್ತಿದೆ ಗುಡ್ಡದ ಪರಿಸರ: ಮಗಿಲು ಮುಟ್ಟಿದ ಜೈಕಾರ
Yallammanagudda is all set for the Bharata Punnimya Fair. Devotees have been flocking to Amma's pres
ವರದಿ-ಮಲ್ಲನಗೌಡ ಪಾಟೀಲ
ಉಗರಗೋಳ: ಇದೇ ಭಾನುವಾರ ನಡೆಯಲಿರುವ ಭಾರತ ಹುಣ್ಣಿಮೆ ಜಾತ್ರೆಗೆ ಯಲ್ಲಮ್ಮನಗುಡ್ಡ ಸಜ್ಜಾಗಿದೆ. ಜಾತ್ರೆಗೂ ಎರಡು ದಿನ ಮುಂಚೆಯಿಂದಲೇ ಅಂದರೆ, ಶುಕ್ರವಾರದಿಂದಲೇ ಅಮ್ಮನ ಸನ್ನಿಧಿಯತ್ತ ಭಕ್ತರ ದಂಡು ಹರಿದುಬರುತ್ತಿದೆ. ಇದು ರಾಜ್ಯದಲ್ಲಿ ನಡೆಯುವ ದೊಡ್ಡ ಜಾತ್ರೆ. ಯಲ್ಲಮ್ಮ ಮುತ್ತೈದೆಯಾಗುತ್ತಾಳೆ ಎಂಬ ನಂಬಿಕೆಯಿಂದ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಭಕ್ತರು ಇದರಲ್ಲಿ ಸೇರುತ್ತಾರೆ.
ಗುಡ್ಡಕ್ಕೆ ಬರುವ ಪ್ರತಿ ಮಹಿಳೆಯು ಮುತ್ತೈದೆತನದ ಸಂಕೇತವಾದ ಹಸಿರು ಬಳೆ ಧರಿಸಿ ಸಂಭ್ರಮಿಸುತ್ತಾಳೆ. ಇದೊಂದೇ ಜಾತ್ರೆ ಅವಧಿಯಲ್ಲಿ ಗುಡ್ಡದ ಅಂಗಡಿಗಳಲ್ಲಿ ಕೋಟ್ಯಂತರ ರೂಪಾಯಿ ಬಳೆ ವಹಿವಾಟು ನಡೆಯುತ್ತದೆ. ಈ ಜಾತ್ರೆಗೆ ಕರ್ನಾಟಕ, ಮಹಾರಾಷ್ಟ್ರ, ಗೋವಾ, ತೆಲಂಗಾಣ ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ತಮ್ಮ ಆರ್ಥಿಕ ಶಕ್ತಿಯನುಸಾರವಾಗಿ ದೇವಿಗೆ ವಿವಿಧ ಕಾಣಿಕೆ ಅರ್ಿಸಿ ಭಕ್ತಿ ಸಮರ್ಿಸುತ್ತಾರೆ. ಶಕ್ತಿ ಯೋಜನೆ ಜಾರಿಯಾದ ನಂತರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರವಾಹೋಪಾದಿಯಲ್ಲಿ ಮಹಿಳಾ ಭಕ್ತರು ಬರುತ್ತಿದ್ದಾರೆ.
ಕೆಲವರು ಖಾಸಗಿ ವಾಹನ, ಚಕ್ಕಡಿ, ಟಂಟಂ ವಾಹನಗಳಲ್ಲಿ ಬರುತ್ತಿದ್ದಾರೆ. ಅಂದು ಬೆಳಿಗ್ಗೆ ಮತ್ತು ಸಂಜೆ ರೇಣುಕಾ ದೇವಿಗೆ ವಿಶೇಷ ಪೂಜೆ ನೆರವೇರುತ್ತದೆ. ನಸುಕಿನ ಜಾವದಿಂದಲೇ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಈಗಾಗಲೇ ಗುಡ್ಡದ ಪರಿಸರ ಭಕ್ತರಿಂದ ತುಂಬಿ ತುಳುಕುತ್ತಿದ್ದು, ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮಗಿಲು ಮುಟ್ಟಿದೆ.
50 ಮೊಬೈಲ್ ಚಾರ್ಜಿಂಗ್ ಸ್ಟೇಷನ್: ‘ಗುಡ್ಡಕ್ಕೆ ಬರುವ ಭಕ್ತರು ತಮ್ಮ ಮೊಬೈಲ್ ಚಾರ್ಜಿಂಗ್ ಮಾಡಲು ಅವಕಾಶ ಸಿಗದೆ ಪರದಾಡುತ್ತಿದ್ದರು. ಅಂಥವರಿಗಾಗಿ 50 ಕಡೆ ಮೊಬೈಲ್ ಚಾರ್ಜಿಂಗ್ ಸ್ಟೇಷನ್ ಮಾಡಿದ್ದೇವೆ. ಚಳಿ ಹೆಚ್ಚಿರುವ ಕಾರಣ, 29 ಸ್ನಾನಗೃಹಗಳಲ್ಲೂ ಬಿಸೀನೀರಿನ ವ್ಯವಸ್ಥೆ ಮಾಡಿದ್ದೇವೆ‘ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಿದ್ದು ಹುಲ್ಲೋಳಿ ತಿಳಿಸಿದರು. ‘ಭಕ್ತರು ಸುಲಭವಾಗಿ ದೇವಿ ದರ್ಶನ ಪಡೆಯಲು ಅನುಕೂಲವಾಗುವಂತೆ ಸಿಬ್ಬಂದಿ ನಿಯೋಜಿಸಿದ್ದೇವೆ. ಜನರ ಸಮಸ್ಯೆ ಆಲಿಸಲು ಒಂದು ಕಡೆ ಪೆಂಡಾಲ್ ಹಾಕಿ ವ್ಯವಸ್ಥೆ ಮಾಡಿದ್ದೇವೆ ಎಂದರು.
ಭಕ್ತರ ಸಂಖ್ಯೆಗೆ ಅನುಗುಣವಾಗಿ ಬೆಳಗಾವಿಯಿಂದ ಯಲ್ಲಮ್ಮನಗುಡ್ಡಕ್ಕೆ ಬಸ್ ಸೌಕರ್ಯ ಕಲ್ಪಿಸಲು ಸೂಚಿಸಿದ್ದೇನೆ: ಶಾಸಕ ಜಾತ್ರೆಗೆ ಪೂರ್ವಭಾವಿಯಾಗಿ ಅಧಿಕಾರಿಗಳ ಜತೆ ಸಭೆ ಮಾಡಿ, ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಸೂಚಿಸಿದ್ದೇನೆ. ಜಾತ್ರೆ ಯಶಸ್ಸಿಗೆ ಎಲ್ಲ ಭಕ್ತರೂ ಸಹಕರಿಸಬೇಕು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 