ಬರ ಘೋಷಣೆಗೆ ಯತ್ನಾಳ ಬೆಂಬಲ
Yatnal supports drought declaration
ತಾಳಿಕೋಟಿ 16: ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ತಾಲೂಕುಗಳು ಸೇರಿದಂತೆ ಇಡೀ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರದ ಮೇಲೆ ಒತ್ತಡ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಸೋಮವಾರ ಪಟ್ಟಣಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಪ್ರವಾಸಿ ಮಂದಿರದ ಸಮೀಪ ಕಳೆದ 12 ದಿನಗಳಿಂದ ಬರ ಘೋಷಣೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.
ಸೆ.21ರಿಂದ ಮೂರು ದಿನಗಳ ವಿಶೇಷ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ರೈತರ ಈ ಗಂಭೀರ ಸಮಸ್ಯೆಯ ಕುರಿತು ಸರ್ಕಾರದ ಮೇಲೆ ಒತ್ತಡ ತರಲು ಪ್ರಯತ್ನಿಸುವುದಾಗಿ ತಿಳಿಸಿದರು. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವುದಾಗಿ ಹೇಳಿದರು. ದೇಶಕ್ಕೆ ಅನ್ನ ನೀಡುವ ಅನ್ನದಾತರನ್ನು ಈ ರೀತಿ ರಸ್ತೆಗಿಳಿದು ಹೋರಾಟ ಮಾಡುವ ಪರಿಸ್ಥಿತಿಗೆ ತಳ್ಳಿರುವುದು ನೋವಿನ ಸಂಗತಿಯಾಗಿದೆ. ಜಿಲ್ಲೆಯ ಶಾಸಕರು ಕೂಡ ಅಧಿವೇಶನದಲ್ಲಿ ಈ ವಿಷಯದ ಕುರಿತು ಧ್ವನಿ ಎತ್ತಿ ಮಾತನಾಡಬೇಕು ಎಂದು ಯತ್ನಾಳ ಹೇಳಿದರು. ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ಧೋರಣೆಯನ್ನು ಟೀಕಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ರೈತ ಸಂಘದ ತಾಲೂಕು ಅಧ್ಯಕ್ಷ ಬಾಳಪ್ಪಗೌಡ ಲಿಂಗದಳ್ಳಿ, ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಪದಾಧಿಕಾರಿಗಳಾದ ಶ್ರೀನಿವಾಸ್ ಗೊಟುಗುಣಿಕಿ, ಮಡಿವಾಳಪ್ಪ ಕಲಬುರ್ಗಿ, ಶರಣಗೌಡ, ಶಿವಾನಂದ ಚಿಂಚೋಳಿ, ರಾಮನಗೌಡ ಯಾಳವಾರ, ಶಾಂತಗೌಡ ಬಿರಾದಾರ, ಜಗನ್ನಾಥ ಮಸರ್ಕಲ್, ಸಂತೋಷ ಉಪ್ಪಲದಿನ್ನಿ, ವಿಶ್ವನಾಥ ಹಾದಿಮನಿ, ಶಿವಪ್ಪ ನಾವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 