ರಾಷ್ಟ್ರೀಯ

ಉತ್ತರ ಭಾರತದಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಉತ್ತರ ಭಾರತದಲ್ಲಿ  ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ನವದೆಹಲಿ, ಆಗಸ್ಟ್.26:  ಜಮ್ಮು-ಕಾಶ್ಮೀರ ಮತ್ತು ದೆಹಲಿ ಸೇರಿದಂತೆ ಉತ್ತರ  ಮತ್ತು ಈಶಾನ್ಯ ರಾಜ್ಯಗಳಲ್ಲಿ ಮುಂದಿನ  ಎರಡು  ದಿನ  ಭಾರಿ ಮಳೆಯಾಗಲಿದೆ  ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

 

ದೆಹಲಿ, ಹಿಮಾಚಲ ಪ್ರದೇಶ, ಉತ್ತರಾಖಂಡ್, ರಾಜಸ್ಥಾನದ ಪಶ್ಚಿಮ ಭಾಗ ಮತ್ತು ಉತ್ತರ ಪ್ರದೇಶದಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಕೆಳಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಾಗಿದ್ದು, ದಕ್ಷಿಣ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಬುಧವಾರ ಮತ್ತು ಗುರುವಾರ ಸಾಧಾರಣ ಮಳೆಯಾಗಲಿದ್ದು, ಶುಕ್ರವಾರ ವರುಣ ಅಬ್ಬರಿಸಲಿದ್ದು ಮಳೆ ಹಿನ್ನೆಲೆಯಲ್ಲಿ  ಎಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತಕ್ಕೆ  ಸೂಚನೆ ನೀಡಲಾಗಿದೆ.

 

ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ, ಚಂಡೀಗಢ್, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲೂ  ಯೆಲ್ಲೋ ಅಲರ್ಟ್ ಮುಂದುವರಿಸಲಾಗಿದೆ. ಇಂದು ಮತ್ತು ನಾಳೆ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

 

ಸುದ್ದಿ ಓದಿ