ನರೇಗಾ ಕಾಮಗಾರಿ ಸ್ಥಳದಲ್ಲಿ ಯೋಗ ದಿನಾಚರಣೆ
Yoga Day celebrated at NREGA work site
ಮುಂಡಗೋಡ 21 : ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ನಿರ್ದೇಶನದಂತೆ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಭಿವೃದ್ಧಿಪಡಿಸಿದ ಅಮೃತ ಸರೋವರದ ದಡದ ಮೇಲೆ ಹಾಗೂ ಮನರೇಗಾ ಯೋಜನೆಯಡಿ ಅನುಷ್ಠಾನಿಸುತ್ತಿರುವ ಕಾಮಗಾರಿ ಸ್ಥಳಗಳಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ನರೇಗಾ ಕೂಲಿ ಕಾರ್ಮಿಕರು, ಕಾಯಕ ಬಂಧುಗಳು ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಇದೇ ವೇಳೆ ದೈನಂದಿನ ಜೀವನದಲ್ಲಿ ಯೋಗಾಭ್ಯಾಸ ರೂಢಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಸಕಾರಾತ್ಮಕ ಪ್ರಭಾವ, ವಿವಿಧ ಯೋಗ ಆಸನಗಳ ಮಹತ್ವ ಮತ್ತು ಉಪಯೋಗ ಹಾಗೂ ಆರೋಗ್ಯಕರ ಜೀವನಶೈಲಿಯ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಲಾಯಿತು. ಪ್ರತಿದಿನವೂ ಎಲ್ಲರೂ ತಪ್ಪದೆ ಯೋಗ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವಠೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಬಿಎಫ್ಟಿ, ಕಾಯಕ ಬಂಧುಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಕೂಲಿಕಾರರು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 