ಯೋಗದಿಂದ ಆರೋಗ್ಯ ವೃದ್ಧಿ ಸಾಧ್ಯ: 12ನೇ ಯೋಗ ದಿನಾಚರಣೆ
Yoga can improve health: 12th Yoga Day celebration
ಲೋಕದರ್ಶನ ವರದಿ
ವಿಜಯಪುರ 22 : ಓಂ ಪತಂಜಲಿ ಬಲಮುರಿ ಗಣೇಶ್ ಉಚಿತ ನಿರಂತರ ಯೋಗ ಕೇಂದ್ರ, ವಿಜಯಪುರದ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾನುವಾರ ಅತ್ಯಂತ ಅರ್ಥಪೂರ್ಣ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು.
ನಗರದ ಯೋಗಾಭ್ಯಾಸಿಗಳು ಮತ್ತು ಯೋಗ ಬಳಗದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಾಮೂಹಿಕ ಯೋಗಾಭ್ಯಾಸದ ಮೂಲಕ ಯೋಗದ ಮಹತ್ವವನ್ನು ಸಾರಿದರು. ಕಾರ್ಯಕ್ರಮವು ಯೋಗ ಶಿಕ್ಷಕಿಯರಾದ ವಿಮಲಾಕ್ಷಿ (ಮಾಯ) ಅರವಿಂದ್ ಸಿಂದಗಿ ಹಾಗೂ ರೇಖಾ ಹಾದಿಮನಿ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಸೂರ್ಯ ನಮಸ್ಕಾರಗಳನ್ನು ಅಭ್ಯಾಸ ಮಾಡಲಾಯಿತು. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಶಿಕ್ಷಕಿಯರು ಕರೆ ನೀಡಿದರು.
“ಯೋಗ ಮಾಡಿ ನಿರೋಗಿಯಾಗಿರಿ. ಯೋಗ ಉಚಿತ, ಆರೋಗ್ಯ ಖಚಿತ. ಯೋಗ ಓಡಿದರೆ ರೋಗ ಓಡುತ್ತದೆ. ಸೂರ್ಯನಿಗೆ ನಮನ ಸಲ್ಲಿಸುವ ಸೂರ್ಯ ನಮಸ್ಕಾರವು ಸರ್ವರೋಗ ಶಮನಕ್ಕೆ ಸಹಕಾರಿಯಾಗಿದೆ” ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಲಕ್ಷ್ಮೀ ಸಾಗರ, ಶೃತಿ ಲೋಣಿ, ಸವಿತಾ ಈರನಗೌಡ ಬಿರಾದಾರ (ಹೆಗಡಿಹಾಳ), ವಿಜಯಲಕ್ಷ್ಮಿ ಬಿರಾದಾರ, ಕಮಲಾ ಅಂಕದ, ಶೈಲಾ ವಾಂಗೆ ಸೇರಿದಂತೆ ಅನೇಕ ಯೋಗ ಸಾಧಕರು ಹಾಗೂ ಮಹಿಳಾ ಸದಸ್ಯರು ಭಾಗವಹಿಸಿ ಯೋಗ ದಿನಾಚರಣೆಯ ಯಶಸ್ಸಿಗೆ ಸಾಕ್ಷಿಯಾದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮವು ಆರೋಗ್ಯಕರ ಜೀವನಶೈಲಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಯೋಗದ ಮಹತ್ವವನ್ನು ಸಾರುವ ಮೂಲಕ ಸಮಾಜದಲ್ಲಿ ಆರೋಗ್ಯದ ಬಗ್ಗೆ ಸಕಾರಾತ್ಮಕ ಸಂದೇಶವನ್ನು ರವಾನಿಸಿತು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 